ಘೋರ ದುರಂತ: ಆಫ್ಘಾನಿಸ್ತಾನದಲ್ಲಿ ಅಮೆರಿಕಾ ವಿಮಾನದಿಂದ ಕೆಳಗೆ ಬಿದ್ದು ಸತ್ತಿದ್ದು ಓರ್ವ ಫುಟ್ಬಾಲ್ ಆಟಗಾರ, ವಿಡಿಯೋ!
ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿದ್ದರಿಂದ ಹೆದರಿದ ಸ್ಥಳೀಯರು ದೇಶ ತೊರೆಯಲು ಮುಂದಾಗಿದ್ದರು. ಈ ವೇಳೆ ಅಮೆರಿಕಾ ವಿಮಾನ ಟೇಕಾಫ್ ವೇಳೆ ಟೈರ್ ಮೇಲೆ ಹತ್ತಿ ಪಲಾಯನಕ್ಕೆ ಯತ್ನಿಸಿದ್ದರು.

ಕಾಬೂಲ್: ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿದ್ದರಿಂದ ಹೆದರಿದ ಸ್ಥಳೀಯರು ದೇಶ ತೊರೆಯಲು ಮುಂದಾಗಿದ್ದರು. ಈ ವೇಳೆ ಅಮೆರಿಕಾ ವಿಮಾನ ಟೇಕಾಫ್ ವೇಳೆ ಟೈರ್ ಮೇಲೆ ಹತ್ತಿ ಪಲಾಯನಕ್ಕೆ ಮುಂದಾಗಿದ್ದರು. ಆದರೆ ಆಗಸದ ಮಧ್ಯದಲ್ಲಿ ವಿಮಾನದಿಂದ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದರು.
ವಿಮಾನದಿಂದ ಕೆಳಗೆ ಬಿದ್ದು ಮೃತಪಟ್ಟವರ ಪೈಕಿ ಓರ್ವ ಫುಟ್ಬಾಲ್ ಆಟಗಾರ ಎಂದು ತಿಳಿದುಬಂದಿದೆ. ಹೌದು 19 ವರ್ಷದ ಝಾಕಿ ಅನ್ವಾರಿ ಆಟಗಾರ ದುರಂತ ಅಂತ್ಯ ಕಂಡಿದ್ದಾನೆ.
ಅನ್ವರಿ ಸಾವನ್ನು ಅಫ್ಘಾನಿಸ್ತಾನದ ದೈಹಿಕ ಶಿಕ್ಷಣ ಮತ್ತು ಕ್ರೀಡೆಗಳ ಜನರಲ್ ಡೈರೆಕ್ಟರೇಟ್ ದೃಢಪಡಿಸಿದೆ.
16 ವರ್ಷದವನಿದ್ದಾಗಿನಿಂದ ಅನ್ವರಿ ಅಫ್ಘಾನ್ ರಾಷ್ಟ್ರೀಯ ಯುವ ತಂಡದಲ್ಲಿ ಆಡುತ್ತಿದ್ದು ಗೆಳೆಯರು ಮತ್ತು ತರಬೇತುದಾರರಿಗೆ ಪ್ರೀತಿಪಾತ್ರರಾಗಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


