ಅಪಹರಣವಾಗಿಲ್ಲ, 150 ಭಾರತೀಯರು ಸುರಕ್ಷಿತವಾಗಿದ್ದಾರೆ: ತಾಲಿಬಾನ್
ಅಪಹರಣವಾಗಿಲ್ಲ, ಭಾರತೀಯರೆಲ್ಲರೂ ಸುರಕ್ಷಿತರಾಗಿದ್ದಾರೆಂದು ಆಫ್ಘಾನಿಸ್ತಾನದ ಮಾಧ್ಯಮಗಳು ಶನಿವಾರ ವರದಿ ಮಾಡಿವೆ.

ಕಾಬುಲ್: ಅಪಹರಣವಾಗಿಲ್ಲ, ಭಾರತೀಯರೆಲ್ಲರೂ ಸುರಕ್ಷಿತರಾಗಿದ್ದಾರೆಂದು ಆಫ್ಘಾನಿಸ್ತಾನದ ಮಾಧ್ಯಮಗಳು ಶನಿವಾರ ವರದಿ ಮಾಡಿವೆ.
ಈ ಹಿಂದೆ ಕಾಬುಲ್ ನಿಂದ ಸ್ಥಳಾಂತರಗೊಳ್ಳಲು ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಜನರನ್ನು ತಾಲಿಬಾನಿಗಳು ಅಪಹರಣ ಮಾಡಿದ್ದು, ಅಪಹರಣಕ್ಕೊಳಗಾದವರಲ್ಲಿ 150 ಭಾರತೀಯರೂ ಇದ್ದಾರೆಂದು ಹೇಳಲಾಗಿತ್ತು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ತಿಳಿದುಬಂದಿರಲಿಲ್ಲ.
ಇದೀಗ ಪ್ರತಿಕ್ರಿಯೆ ನೀಡಿರುವ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಾಸಿಖ್ ಅವರು, ವರದಿಗಳನ್ನು ನಿರಾಕರಿಸಿದ್ದಾರೆ.
ಇದೀಗ ಅಫ್ಘಾನಿಸ್ತಾನ ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದು, ಯಾವುದೇ ಭಾರತೀಯರ ಅಪರಹಣವಾಗಿಲ್ಲ, ಎಲ್ಲರೂ ಸುರಕ್ಷಿತರಾಗಿದ್ದಾರೆ. ಸ್ಥಳಾಂತರಗೊಳ್ಳುತ್ತಿರುವ ಜನರ ದಾಖಲೆಗಳ ಪರಿಶೀಲನಾ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿವೆ.
ಕಾಬೂಲ್ನಿಂದ ಈವರೆಗೆ ಸುಮಾರು 12 ಸಾವಿರ ವಿದೇಶಿಯರ ರಕ್ಷಣೆ ಮಾಡಲಾಗಿದ್ದು, ಅವರನ್ನೆಲ್ಲಾ ಏರ್ಲಿಫ್ಟ್ ಮೂಲಕ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಿದೇಶಿಯರನ್ನು ರಕ್ಷಣೆ ಮಾಡುತ್ತಿರುವ ಹೊತ್ತಿನಲ್ಲೇ ಭಾರತೀಯರು ಅಪಹರಣವಾಗಿರುವ ವಿಚಾರ ಸಾಕಷ್ಟು ಆತಂಕ ಮೂಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


