ಸೌದಿ ಅರೇಬಿಯಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ: 8 ಮಂದಿಗೆ ಗಾಯ, ವಿಮಾನಕ್ಕೆ ಹಾನಿ
ಸಿಡಿ ಮದ್ದು ತುಂಬಿದ ಡ್ರೋನ್ ನೈಋತ್ಯ ಸೌದಿ ಅರೇಬಿಯಾದಲ್ಲಿನ ವಿಮಾನ ನಿಲ್ದಾಣವನ್ನು ಟಾರ್ಗೆಟ್ ಮಾಡಿದ್ದು ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರೆ, ಪ್ರಯಾಣಿಕ ವಿಮಾನವೊಂದು ಹಾನಿಗೀಡಾಗಿದೆ.

ದುಬೈ: ಸಿಡಿ ಮದ್ದು ತುಂಬಿದ ಡ್ರೋನ್ ನೈಋತ್ಯ ಸೌದಿ ಅರೇಬಿಯಾದಲ್ಲಿನ ವಿಮಾನ ನಿಲ್ದಾಣವನ್ನು ಟಾರ್ಗೆಟ್ ಮಾಡಿದ್ದು ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದರೆ, ಪ್ರಯಾಣಿಕ ವಿಮಾನವೊಂದು ಹಾನಿಗೀಡಾಗಿದೆ.
ಯೆಮೆನ್ ನಲ್ಲಿ ಯುದ್ಧದಲ್ಲಿ ನಿರತರಾಗಿರುವಾಗ ಸೌದಿ ಅರೇಬಿಯಾದಲ್ಲಿ ಈ ಘಟನೆ ನಡೆದಿದೆ. ದಾಳಿಗೆ ತಕ್ಷಣಕ್ಕೆ ಯಾವುದೇ ಸಂಘಟನೆಗಳು ಹೊಣೆ ಹೊತ್ತಿಲ್ಲ. 24 ಗಂಟೆಗಳಲ್ಲಿ ಸಂಭವಿಸುತ್ತಿರುವ ಇಂತಹ ಎರಡನೇ ದಾಳಿ ಇದಾಗಿದೆ.
ಈ ಹಿಂದಿನ ದಾಳಿಯಲ್ಲಿ ಸಾವು-ನೋವುಗಳು ಸಂಭವಿಸಿರಲಿಲ್ಲ. ಸೌದಿ ನೇತೃತ್ವದ ಮಿಲಿಟರಿ ಪಡೆ ಇರಾನ್ ಬೆಂಬಲಿತ ಶಿಯಾ ಬಂಡಾಯದವರ ವಿರುದ್ಧ ಯೆಮೆನ್ ನಲ್ಲಿ ಯುದ್ಧದಲ್ಲಿ ಕೈ ಜೋಡಿಸಿದೆ. ತಕ್ಷಣಕ್ಕೆ ಸರ್ಕಾರದಿಂದ ಡ್ರೋನ್ ದಾಳಿ ಬಗ್ಗೆ ಯಾವುದೇ ಪ್ರತಿಕ್ರಿಯೆಯೂ ದೊರೆತಿಲ್ಲ.
2015 ರಿಂದಲೂ ಯೆಮೆನ್ ನ ಹೌತಿ ಬಂಡಾಯದವರು ಸೌದಿ ವಿರುದ್ಧ ಯುದ್ಧದಲ್ಲಿ ತೊಡಗಿದ್ದು ಹಲವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇನಾ ನೆಲೆಗಳನ್ನು ಟಾರ್ಗೆಟ್ ಮಾಡುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


