ಪಾಕಿಸ್ತಾನದಲ್ಲಿ ಅಮೆರಿಕಾ ಸೇನಾ ಸಿಬ್ಬಂದಿಗಳ ವಾಸ್ತವ್ಯ ತಾತ್ಕಲಿಕವಷ್ಟೇ: ಸಚಿವ
ಆಫ್ಘಾನಿಸ್ತಾನದಿಂದ ವಾಪಸ್ಸಾಗುತ್ತಿರುವ ಅಮೆರಿಕ ಸೇನಾ ಸಿಬ್ಬಂದಿಗಳು ಪಾಕಿಸ್ತಾನಕ್ಕೆ ಆಗಮಿಸುತ್ತಿರುವುದರ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ಪಾಕಿಸ್ತಾನದ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇಸ್ಲಾಮಾಬಾದ್: ಆಫ್ಘಾನಿಸ್ತಾನದಿಂದ ವಾಪಸ್ಸಾಗುತ್ತಿರುವ ಅಮೆರಿಕ ಸೇನಾ ಸಿಬ್ಬಂದಿಗಳು ಪಾಕಿಸ್ತಾನಕ್ಕೆ ಆಗಮಿಸುತ್ತಿರುವುದರ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದು, ಈ ಬಗ್ಗೆ ಪಾಕಿಸ್ತಾನದ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಆಫ್ಘಾನಿಸ್ತಾನದಿಂದ ಬರುವ ಅಮೆರಿಕ ಸಿಬ್ಬಂದಿಗಳು ಪಾಕಿಸ್ತಾನದಲ್ಲಿ ದೀರ್ಘಾವಧಿವರೆಗೆ ಇರುತ್ತಾರೆ ಎಂಬ ಊಹಾಪೋಹಗಳನ್ನು ಸಚಿವರು ತಳ್ಳಿ ಹಾಕಿದ್ದಾರೆ.
ಪಾಕಿಸ್ತಾನದಲ್ಲಿ ಅಮೆರಿಕ ಪಡೆಗಳ ವಾಸ್ತವ್ಯ ತಾತ್ಕಾಲಿಕವಾಗಿರಲಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ಅಹ್ಮದ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಮೆರಿಕ ಸೇನಾ ಸಿಬ್ಬಂದಿಗಳು ಪಾಕಿಸ್ತಾನಕ್ಕೆ ತಲುಪುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನದಿಂದ ಬಂದಿರುವ ವಿದೇಶಿಗರಿಗೆ 21-30 ದಿನಗಳ ತಾತ್ಕಾಲಿಕ ವೀಸಾವನ್ನು ನೀಡಲಾಗಿದೆ ಎಂದೂ ಪಾಕ್ ಸಚಿವ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


