ಕೋವಿಡ್ ರೂಪಾಂತರಿ ಓಮಿಕ್ರಾನ್ ನಿಂದ ಸಾವು, ಆಸ್ಪತ್ರೆ ದಾಖಲಾತಿ ಹೆಚ್ಚಳ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ
ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವುನೋವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿರುವುದಾಗಿ ಸ್ಪುಟ್ನಿಕ್ ವರದಿ ಮಾಡಿದೆ.

ಜಿನೆವಾ: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವುನೋವುಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿರುವುದಾಗಿ ಸ್ಪುಟ್ನಿಕ್ ವರದಿ ಮಾಡಿದೆ.
"ಜಾಗತಿಕವಾಗಿ ಹೊರ ರೂಪಾಂತರಿ ವೈರಸ್ ಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವುಗಳು ಸಹ ಹೆಚ್ಚು ವರದಿಯಾಗುವ ಸಾಧ್ಯತೆ ಇದೆ" ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಓಮಿಕ್ರಾನ್ ಸೋಂಕಿತರ ಕ್ಲಿನಿಕಲ್ ಚಿತ್ರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಹೆಚ್ಚಿನ ಮಾಹಿತಿಯ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ ಮತ್ತು ಡಬ್ಲ್ಯುಎಚ್‌ಒ COVID-19 ಕ್ಲಿನಿಕಲ್ ಡೇಟಾ ಪ್ಲಾಟ್‌ಫಾರ್ಮ್ ಮೂಲಕ ಆಸ್ಪತ್ರೆಗೆ ದಾಖಲಾದ ಓಮಿಕ್ರಾನ್ ರೋಗಿಗಳ ಡೇಟಾವನ್ನು ಸಂಗ್ರಹಿಸಲು ಮತ್ತು ಹಂಚಿಕೊಳ್ಳಲು ಎಲ್ಲಾ ದೇಶಗಳಿಗೆ ಪ್ರೋತ್ಸಾಹಿಸುತ್ತಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ.
ಓಮಿಕ್ರಾನ್ ಕೊರೋನಾ ವೈರಸ್ ರೂಪಾಂತರಿ ಡೆಲ್ಟಾಗಿಂತ ಹೆಚ್ಚು ಪ್ರಬಲವಾಗಿದ್ದು, ತೀವ್ರವಾಗಿ ಹರಡುತ್ತಿದೆ ಹಾಗೂ ಲಸಿಕೆ ಕೂಡ ಇದರ ಮೇಲೆ ಪರಿಣಾಮ ಬೀರುವಲ್ಲಿ ಅಷ್ಟೊಂದು ಯಶಸ್ವಿಯಾಗಿಲ್ಲ ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಹೆಚ್ಚಿನ ಸಂಖ್ಯೆಯ ಓಮಿಕ್ರಾನ್ ರೂಪಾಂತರಗಳು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಪ್ರಯಾಣ ನಿಷೇಧವನ್ನು ಹೇರಲು ಕಾರಣವಾಗಿದೆ ಮತ್ತು ಓಮಿಕ್ರಾನ್ ಹರಡುವಿಕೆಯನ್ನು ನಿಧಾನಗೊಳಿಸಲು ದೇಶೀಯ ನಿರ್ಬಂಧಗಳನ್ನು ಮರುಪರಿಚಯಿಸಲು ಪ್ರಪಂಚದಾದ್ಯಂತದ ಹಲವು ದೇಶಗಳನ್ನು ಮುಂದಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


