ವಿದೇಶ

ಅಫ್ಘಾನಿಸ್ತಾನದಿಂದ ಆಗಸ್ಟ್ 31 ರೊಳಗೆ ಸೇನೆ ವಾಪಸ್ಸು: ಜೋ ಬೈಡೆನ್

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅಫ್ಘಾನಿಸ್ತಾನದಿಂದ ತನ್ನ ದೇಶದ ಸೇನೆಯನ್ನು ವಾಪಸ್ಸು ಕರೆಸಿಕೊಳ್ಳುವ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನದಿಂದ ಆಗಸ್ಟ್ 31 ರೊಳಗೆ ಸೇನೆ ವಾಪಸ್ಸು: ಜೋ ಬೈಡೆನ್
ಜೋ ಬೈಡನ್
Published On :

ವಾಷಿಂಗ್ಟನ್‌​: ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅಫ್ಘಾನಿಸ್ತಾನದಿಂದ ತನ್ನ ದೇಶದ ಸೇನೆಯನ್ನು ವಾಪಸ್ಸು ಕರೆಸಿಕೊಳ್ಳುವ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ಅಮೆರಿಕಾದ ಕಾರ್ಯಾಚರಣೆ ಆಗಸ್ಟ್ 31ಕ್ಕೆ ಮುಗಿಯಲಿದೆ ಎಂದು ಅವರು ಹೇಳಿದ್ದಾರೆ. ಅಮೆರಿಕಾ ಸೇನೆಯನ್ನು ಅಫ್ಘಾನಿಸ್ತಾನದಿಂದ ಹಿಂತೆಗೆದುಕೊಳ್ಳುವುದನ್ನು ಬೈಡನ್ ಸಮರ್ಥಿಸಿಕೊಂಡರು. ಅಮೆರಿಕಾ ಸೇನಾ ಕ್ರಮಗಳು ಜನರ ಜೀವ ಉಳಿಸಿವೆ ಎಂದು ಅವರು ತಿಳಿಸಿದ್ದಾರೆ.

ತಾಲಿಬಾನ್ ಅಫ್ಘಾನಿಸ್ತಾನದ ಹೆಚ್ಚಿನ ಪ್ರದೇಶಗಳ ಮೇಲೆ ನಿಯಂತ್ರಣ ಸಾಧಿಸುತ್ತಿರುವ ಸಂದರ್ಭದಲ್ಲಿ ಅಧ್ಯಕ್ಷ ಬೈಡನ್ ಈ  ಹೇಳಿಕೆ ನೀಡಿದ್ದಾರೆ. 2001 ರ ಸೆಪ್ಟೆಂಬರ್ 11 ರಂದು ನಡೆದ ಉಗ್ರರ ದಾಳಿಯ ನಂತರ ಕಳೆದ ಸುಮಾರು 20 ವರ್ಷಗಳಿಂದ ಅಮೆರಿಕಾ ಸೇನೆ ಅಫ್ಘಾನಿಸ್ತಾನದಲ್ಲಿ ಹೋರಾಡುತ್ತಿದೆ.

2021 ಸೆಪ್ಟೆಂಬರ್ 11 ಗಡುವಿನೊಳಗೆ ಅಮೆರಿಕಾ ಯೋಧರು ಸ್ವದೇಶಕ್ಕೆ ವಾಪಸ್ಸಾಗಬೇಕು ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಈ ವರ್ಷದ ಆರಂಭದಲ್ಲಿ ಗಡುವು ವಿಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.