ಬಾಗ್ದಾದ್ ನಲ್ಲಿ ಈದ್ ಗೂ ಮುನ್ನ ರಸ್ತೆ ಬದಿ ಬಾಂಬ್ ಸ್ಫೋಟ: 25 ಮಂದಿ ಸಾವು
ಬಾಗ್ದಾದ್ ನ ಉಪನಗರವನ್ನು ಗುರಿಯಾಗಿರಿಸಿಕೊಂಡು ರಸ್ತೆ ಬದಿಯಲ್ಲಿ ನಡೆಸಿದ ಬಾಂಬ್ ಸ್ಫೋಟಕ್ಕೆ 25 ಮಂದಿ ಬಲಿಯಾಗಿದ್ದಾರೆ.

ಬಾಗ್ದಾದ್: ಬಾಗ್ದಾದ್ ನ ಉಪನಗರವನ್ನು ಗುರಿಯಾಗಿರಿಸಿಕೊಂಡು ರಸ್ತೆ ಬದಿಯಲ್ಲಿ ನಡೆಸಿದ ಬಾಂಬ್ ಸ್ಫೋಟಕ್ಕೆ 25 ಮಂದಿ ಬಲಿಯಾಗಿದ್ದಾರೆ.
ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಇರಾಕ್ ನ ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈದ್ ಆಚರಣೆಯ ಹಿನ್ನೆಲೆಯಲ್ಲಿ ಜನತೆ ವಸ್ತುಗಳ ಖರೀದಿಯಲ್ಲಿ ಸದರ್ ನಗರದ ವಹೈಲತ್ ಮಾರ್ಕೆಟ್ ನಲ್ಲಿ ಈ ಘಟನೆ ನಡೆದಿದೆ.
ಘಟನೆಗೆ ಯಾವುದೇ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದೇ ಪ್ರದೇಶಗಳಲ್ಲಿ ಈ ಹಿಂದೆ ಇಸ್ಲಾಮಿಕ್ ಸ್ಟೇಟ್ ಇಂತಹ ಸ್ಫೋಟಗಳನ್ನು ನಡೆಸಿದೆ.
ಈ ವರ್ಷದಲ್ಲಿ ಜನನಿಬಿಡ ಮಾರುಕಟ್ಟೆಯಲ್ಲಿ ಸಂಭವಿಸಿರುವ ಮೂರನೇ ಸ್ಫೋಟ ಪ್ರಕರಣ ಇದಾಗಿದ್ದು, ಮಾರುಕಟ್ಟೆ ಪ್ರದೇಶದಲ್ಲಿ ಜವಾಬ್ದಾರಿ ಹೊಂದಿದ್ದ ಫೆಡರಲ್ ಪೊಲೀಸ್ ರೆಜಿಮೆಂಟ್ ನ ಕಮಾಂಡರ್ ನ್ನು ಬಂಧಿಸಿ ವಿಚಾರಣೆ ನಡೆಸುವುದಕ್ಕೆ ಪ್ರಧಾನಿ ಮುಸ್ತಫಾ-ಅಲ್-ಕಧಿಮಿ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


