ತಾಲಿಬಾನಿಗಳು ಕೂಡ ಸಾಮಾನ್ಯ ನಾಗರೀಕರೇ, ಉಗ್ರರಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನು ಉಗ್ರರಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಬುಧವಾರ ಹೇಳಿದ್ದಾರೆ.

ಇಸ್ಲಾಮಾಬಾದ್: ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನು ಉಗ್ರರಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಬುಧವಾರ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ಆರೋಪಕ್ಕೆ ಇಮ್ರಾನ್ಖಾನ್ ಅವರು ಮೊದಲ ಬಾರಿಗೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ತಾಲಿಬಾನ್ ಎಂದು ಗುರುತಿಸಲಾಗಿರುವವರಲ್ಲಿ ಹೆಚ್ಚಿನವರು ಜನಸಾಮಾನ್ಯರು. ಗಡಿಯಲ್ಲಿ ಮೂರು ಮಿಲಿಯನ್ ಆಫ್ಘನ್ ನಿರಾಶ್ರಿತರಿದ್ದಾರೆ. ಅವರನ್ನು ಹೇಗೆ ಕೊಲ್ಲೋಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನವು 30 ಲಕ್ಷ ಆಫ್ಘನ್ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಅದರಲ್ಲಿ ಹೆಚ್ಚಿನವರು ಪಶ್ತೂನ್ ಹಾಗೂ ತಾಲಿಬಾನ್ ಹೋರಾಟಗಾರರ ಜನಾಂಗದವರೇ ಆಗಿದ್ದಾರೆ. ಸದ್ಯ 5 ಲಕ್ಷ ಶಿಬಿರಗಳಿದ್ದು, ಅವುಗಳಲ್ಲಿ ಕೆಲವು ಉಗ್ರ ಸಂಘಟನೆಗೆ ಸೇರಿದವರಾಗಿಲ್ಲ. ಜನಸಾಮಾನ್ಯರೂ ಇದ್ದಾರೆ. ಅವರನ್ನು ನಾವು ಹೇಗೆ ಹತ್ಯೆಗೈಯ್ಯುವುದಕ್ಕೆ ಸಾಧ್ಯ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಪಾಕಿಸ್ತಾನದಲ್ಲಿನ ತಾಲಿಬಾನ್ ಸುರಕ್ಷಿತ ತಾಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸುರಕ್ಷಿತ ತಾಣಗಳು ಎಲ್ಲಿವೆ? ಪಾಕಿಸ್ತಾನದಲ್ಲಿ ಮೂರು ದಶಲಕ್ಷ ನಿರಾಶ್ರಿತರು ಇದ್ದಾರೆ, ಅವರು ತಾಲಿಬಾನ್‌ನಂತೆಯೇ ಒಂದೇ ಜನಾಂಗದವರಾಗಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನ ಸರ್ಕಾರದ ವಿರುದ್ಧದ ಹೋರಾಟದಲ್ಲಿ ತಾಲಿಬಾನ್‌ಗಳಿಗೆ ಮಿಲಿಟರಿ, ಆರ್ಥಿಕವಾಗಿ ಮತ್ತು ಗುಪ್ತಚರ ಮಾಹಿತಿಯೊಂದಿಗೆ ಪಾಕಿಸ್ತಾನ ಸಹಾಯ ಮಾಡಿದೆ ಎಂದು ಬಹಳ ಹಿಂದಿನಿಂದಲೂ ಆರೋಪಿಸಲಾಗಿದೆ, ಆದರೆ, ಇಮ್ರಾನ್ ಖಾನ್ ಈ ಆರೋಪಗಳನ್ನು ತಳ್ಳಿ ಹಾಕಿದ್ದು, ಇದೊಂದು ಅನ್ಯಾಯದ ಆರೋಪ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


