ವಿದೇಶ

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 

ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಪ್ರಶಸ್ತಿ ಸಂದಿದೆ.

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ 
ಮೇಘಾ ರಾಜಗೋಪಾಲನ್
Published On :

ನ್ಯೂಯಾರ್ಕ್:  ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ  ಪ್ರಶಸ್ತಿ ಸಂದಿದೆ.

ಮೇಘಾ ರಾಜಗೋಪಾಲನ್ ಅವರು ಬಝ್ ಫೀಡ್ ನ್ಯೂಸ್ ಎಂಬ ಸುದ್ದಿಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಟೆಂಪಾ ಬೇ ಟೈಮ್ಸ್ ನ ವರದಿಗಾರರಾದ ನೀಲ್ ಬೇಡಿ ಹಾಗೂ ಕ್ಯಾಥ್ಲಿನ್ ಮ್ಯಾಕ್ ಗ್ರೋರಿ ಸಹ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ರಹಸ್ಯವಾಗಿ ಜೈಲುಗಳನ್ನು ನಿರ್ಮಿಸಿ ಮತ್ತು ಸಾಮೂಹಿಕ ತಡೆ ಶಿಬಿರಗಳನ್ನು ಮಾಡಿ ಅದರಲ್ಲಿ ಮಕ್ಕಳು ಸೇರಿದಂತೆ ಲಕ್ಷಾಂತರ ಮುಸ್ಲಿಂರನ್ನು ಬಂಧಿಸಿಟ್ಟಿದ್ದ ವಿಚಾರವನ್ನು ಮೇಘಾ ರಾಜಗೋಪಾಲ್ ತಮ್ಮ ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.