ಜೋ ಬೈಡನ್ ನನ್ನನ್ನು 'ಕೊಲೆಗೆಡುಕ' ಎಂದಿದ್ದಕ್ಕೆ ನನಗೆ ಚಿಂತೆಯಿಲ್ಲ: ವ್ಲಾಡಿಮಿರ್ ಪುಟಿನ್
ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ತಮ್ಮನ್ನು ʼಹಂತಕʼ ಎಂದು ಕರೆದಿದ್ದರ ಬಗ್ಗೆ ತಾವು ಹೆಚ್ಚು ಚಿಂತಿಸಿಲ್ಲ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ತಮ್ಮನ್ನು ʼಹಂತಕʼ ಎಂದು ಕರೆದಿದ್ದರ ಬಗ್ಗೆ ತಾವು ಹೆಚ್ಚು ಚಿಂತಿಸಿಲ್ಲ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದ್ದಾರೆ.
ನನ್ನ ಆಡಳಿತಾವಧಿಯಲ್ಲಿ, ಎಲ್ಲಾ ರೀತಿಯ ಕಾರಣಗಳು ಮತ್ತು ನೆಪಗಳಿಂದಾಗಿ ನಾನು ಎಲ್ಲಾ ಆಯಾಮಗಳಿಂದ, ಕ್ಷೇತ್ರಗಳಿಂದ ದಾಳಿ ಎದುರಿಸಿದ್ದೇನೆ. ಇದ್ಯಾವುದೂ ನನ್ನನ್ನು ಅಚ್ಚರಿಗೊಳಿಸಿಲ್ಲʼ ಎಂದು ಪುಟಿನ್ ಹೇಳಿದ್ದಾರೆ.
ಈ ವೇಳೆ ರಷ್ಯಾ-ಅಮೆರಿಕ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿರುವ ಅವರು, ಇತ್ತೀಚಿನ ವರ್ಷಗಳಲ್ಲಿ ಉಭಯ ರಾಷ್ಟ್ರಗಳ ಸಂಬಂಧ ತೀರಾ ಕೆಳಮಟ್ಟದಲ್ಲಿದೆ ಎಂದಿದ್ದಾರೆ.
ಯುಎಸ್ ಮಾಜಿ ಅಧ್ಯಕ್ಷ ಟ್ರಂಪ್ ಅಸಾಧಾರಣ ಮತ್ತು ಪ್ರತಿಭಾವಂತ ವ್ಯಕ್ತಿ ಎಂದು ನಾನು ಈಗಲೂ ನಂಬುತ್ತೇನೆ. ಇಲ್ಲದಿದ್ದರೆ ಅವರು ಅಮೆರಿಕದ ಅಧ್ಯಕ್ಷರಾಗುತ್ತಿರಲಿಲ್ಲ. ಅವರದು ವರ್ಣರಂಜಿತ ವ್ಯಕ್ತಿತ್ವ. ನೀವು ಅವರನ್ನು ಇಷ್ಟಪಡಬಹುದು ಅಥವಾ ಇಷ್ಟಪಡದೆಯೂ ಇರಬಹುದು. ಈ ಹಿಂದೆ ಅವರೇನು ತುಂಬಾ ಕಾಲದಿಂದ ರಾಜಕೀಯದಲ್ಲಿ ಇದ್ದವರಲ್ಲ. ಕೆಲವರು ಅವರನ್ನು ಇಷ್ಟಪಡುತ್ತಾರೆ, ಇನ್ನೂ ಕೆಲವರು ಇಷ್ಟಪಡುವುದಿಲ್ಲ. ಆದರೆ ಅದೇ ವಾಸ್ತವʼ ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


