ಮುರಿದು ಬಿತ್ತು 27 ವರ್ಷದ ದಾಂಪತ್ಯ: ಬಿಲ್ ಗೇಟ್ಸ್ ದಂಪತಿ ವಿಚ್ಛೇದನ ಘೋಷಣೆ
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಗೇಟ್ಸ್ ದಂಪತಿ ಮದುವೆಯಾಗಿ 27 ವರ್ಷದ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ.

ವಾಷಿಂಗ್ಟನ್: ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಗೇಟ್ಸ್ ದಂಪತಿ ಮದುವೆಯಾಗಿ 27 ವರ್ಷದ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ.
ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಈ ಜೋಡಿಯು ಒಂದಾಗಿದೆ. ಇವರ ಜಂಟಿ ಸಂಪತ್ತನ್ನು 13,000 ಕೋಟಿ ಡಾಲರ್ ಇದೆ ಎಂದು ಅಂದಾಜಿಸಲಾಗಿದೆ. ಬಿಲ್ ಗೇಟ್ಸ್ ಅವರ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.
ವಿಚ್ಛೇದನ ನೀಡಿರುವ ಕುರಿತು ಟ್ವೀಟ್ ಮಾಡಿರುವ ಬಿಲ್ ಗೇಟ್ಸ್, ‘27 ವರ್ಷಗಳ ದಾಂಪತ್ಯದ ನಂತರ ನಾವು ವಿಚ್ಛೇದನ ಘೋಷಿಸಿದ್ದೇವೆ. ಜಾಗತಿಕ ಆರೋಗ್ಯ, ಲಿಂಗ ಸಮಾನತೆ, ಶಿಕ್ಷಣ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳಿಗೆ ಧನಸಹಾಯ ನೀಡುವ ಕೆಲಸವನ್ನು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನಲ್ಲಿ ತಮ್ಮ ಜಂಟಿ ಸಹಭಾಗಿತ್ವವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದ್ದಾರೆ.
ಕಳೆದ 27 ವರ್ಷದಲ್ಲಿ ನಾವು ಮೂವರು ಮಕ್ಕಳನ್ನು ಬೆಳೆಸಿದ್ದು, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಫೌಂಡೇಷನ್ ಸ್ಥಾಪಿಸಿದ್ದೇವೆ. ಆದರೀಗ ಈ ದಾಂಪತ್ಯ ಜೀವನ ಕೊನೆಗೊಳಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ’ ಎಂದು ಹೇಳಿಕೆ ನೀಡಿರುವ ಪ್ರತಿಯನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


