ವಿದೇಶ

ಕೋವಿಡ್‌ ಲಸಿಕೆಗಳಿಗೆ ಪೇಟೆಂಟ್ ಮನ್ನಾ: ಭಾರತ, ದಕ್ಷಿಣ ಆಫ್ರಿಕಾ ಪ್ರಸ್ತಾವನೆಗೆ ಅಮೆರಿಕ ಬೆಂಬಲ

ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆಯನ್ನು ಹೆಚ್ಚಿಸಲು ಲಸಿಕೆಯ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡಬೇಕು ಎಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಶ್ವ ವ್ಯಾಪಾರ ಸಂಘಟನೆ(ಡಬ್ಲ್ಯೂಟಿಒ)ಗೆ....

ಕೋವಿಡ್‌ ಲಸಿಕೆಗಳಿಗೆ ಪೇಟೆಂಟ್ ಮನ್ನಾ: ಭಾರತ, ದಕ್ಷಿಣ ಆಫ್ರಿಕಾ ಪ್ರಸ್ತಾವನೆಗೆ ಅಮೆರಿಕ ಬೆಂಬಲ
ಜೋ ಬೈಡೆನ್
Published On :

ವಾಷಿಂಗ್ಟನ್: ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆಯನ್ನು ಹೆಚ್ಚಿಸಲು ಲಸಿಕೆಯ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡಬೇಕು ಎಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಶ್ವ ವ್ಯಾಪಾರ ಸಂಘಟನೆ(ಡಬ್ಲ್ಯೂಟಿಒ)ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಆಡಳಿತ ಬೆಂಬಲಿಸಿದೆ.

ಪೇಟೆಂಟ್ ಜಾರಿಗೆ ಕಾಲಮಿತಿಯ ತಡೆ ನೀಡುವಂತೆ ಡಬ್ಲ್ಯುಟಿಒಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮನವಿ ಮಾಡಿದ್ದವು. ಹಲವಾರು ದೇಶಗಳು ಭಾರತದ ಈ ನಡೆಗೆ ಬೆಂಬಲ ಸೂಚಿಸಿದ್ದವು.

ಈ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಮತ್ತು ದಕ್ಷಿಣ ಆಫ್ರಿಕಾದ ರಾಜತಾಂತ್ರಿಕರು ಅಮೆರಿಕದ ಸೆನೆಟರ್‌ಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಈಗ ಅಮೆರಿಕ ಸಹ ಬೆಂಬಲ ನೀಡಿದೆ.

ಕೋವಿಡ್‌ ಸಾಂಕ್ರಮಿಕವು ಜಾಗತಿಕ ಆರೋಗ್ಯ ಬಿಕ್ಕಟ್ಟಾಗಿದೆ. ಜೋ ಬಿಡೆನ್ ಆಡಳಿತವು ಬೌದ್ಧಿಕ ಆಸ್ತಿ ಸಂರಕ್ಷಣೆಯನ್ನು ಬಲವಾಗಿ ನಂಬುತ್ತದೆ. ಆದರೆ, ಕೋವಿಡ್‌ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಉದ್ದೇಶದಿಂದ ಕೋವಿಡ್‌ ಲಸಿಕೆಗಳಿಗೆ ಪೇಟೆಂಟ್ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದನ್ನು ಬೆಂಬಲಿಸುತ್ತದೆ ಎಂದು ಯುಎಸ್ ವ್ಯಾಪಾರ ಪ್ರತಿನಿಧಿ ಕ್ಯಾಥರೀನ್‌ ತೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಸಿಕೆಗಳನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡಲು ಈ ಪ್ರಸ್ತಾಪವನ್ನು ಬೆಂಬಲಿಸುವಂತೆ ಒತ್ತಾಯಿಸಿ ಬಹುಪಾಲು ಡೆಮಾಕ್ರಟಿಕ್ ಕಾಂಗ್ರೆಸ್ಸಿಗರು ಅಧ್ಯಕ್ಷ ಜೋ ಬಿಡನ್ ಅವರಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.