ಕಾಶ್ಮೀರದ ಕುರಿತ ನಿರ್ಧಾರ ಬದಲಾಯಿಸುವವರೆಗೂ ಭಾರತದ ಜೊತೆ ಮಾತುಕತೆ ಇಲ್ಲ: ಪಾಕ್
ಕಾಶ್ಮೀರದ ಕುರಿತ ನಿರ್ಧಾರವನ್ನು ಭಾರತದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಇಸ್ಲಾಮಾಬಾದ್: ಕಾಶ್ಮೀರದ ಕುರಿತ ನಿರ್ಧಾರವನ್ನು ಭಾರತದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಮರುಸ್ಥಾಪನೆ ಮಾಡಬೇಕು, ರದ್ದುಗೊಳಿಸಿರುವ ನಿರ್ಧಾರವನ್ನು ಬದಲಾಯಿಸಬೇಕು ಆಗ ಮಾತ್ರವೇ ಮಾತುಕತೆ ಸಾಧ್ಯ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಭಾರತ 2019 ರಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು.
ಆಗಸ್ಟ್ 05 ರ ಆದೇಶವನ್ನು ಭಾರತ ಹಿಂಪಡೆಯುವವರೆಗೂ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯವೇ ಇಲ್ಲ ಎಂದು ಸಾರ್ವಜನಿಕರ ಪ್ರಶ್ನೆಗಳಿಗೆ ನೇರ ಪ್ರಸಾರ ಕಾರ್ಯಕ್ರಮವೊಂದರಲ್ಲಿ ಇಮ್ರಾನ್ ಖಾನ್ ಹೇಳಿದ್ದಾರೆ. ಇದಕ್ಕೂ ಮುನ್ನ ವಿದೇಶಾಂಗ ಸಚಿವರೂ ಇದೇ ಮಾದರಿಯ ಹೇಳಿಕೆ ನೀಡಿದ್ದರು. ಈಗ ಭಾರತದೊಂದಿಗೆ ಮಾತುಕತೆ ನಡೆಸಲಾಗುತ್ತಿಲ್ಲ. ಆದರೆ ಭಾರತ ಕಾಶ್ಮೀರದೆಡೆಗಿನ ನೀತಿ ಬದಲಿಸಿದಲ್ಲಿ, ಕಾಶ್ಮೀರದ ಜನತೆಗೆ ರಿಲೀಫ್ ನೀಡಿದಲ್ಲಿ ಮಾತುಕತೆ ನಡೆಸಬಹುದೆಂದು ಖುರೇಷಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


