ನೇಪಾಳ ಸಂಸತ್ತು ವಿಸರ್ಜಿಸಿದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ; ನವೆಂಬರ್ ನಲ್ಲಿ ಮಧ್ಯಂತರ ಚುನಾವಣೆ ಘೋಷಣೆ
ನೇಪಾಳದಲ್ಲಿ ಬಹುಮತ ಕಳೆದುಕೊಂಡಿದ್ದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಕೊನೆಗೂ ಅಂತ್ಯವಾಗಿದ್ದು, ನೇಪಾಳ ಸಂಸತ್ತನ್ನು ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ವಿಸರ್ಜಿಸಿ ಮಧ್ಯಂತರ ಚುನಾವಣೆ ಘೋಷಣೆ ಮಾಡಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ಬಹುಮತ ಕಳೆದುಕೊಂಡಿದ್ದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಕೊನೆಗೂ ಅಂತ್ಯವಾಗಿದ್ದು, ನೇಪಾಳ ಸಂಸತ್ತನ್ನು ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ವಿಸರ್ಜಿಸಿ ಮಧ್ಯಂತರ ಚುನಾವಣೆ ಘೋಷಣೆ ಮಾಡಿದ್ದಾರೆ.
ನಿನ್ನೆ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ವಿರೋಧ ಪಕ್ಷಗಳು ಪ್ರತ್ಯೇಕವಾಗಿ ನೇಪಾಳ ರಾಷ್ಟ್ರಪತಿಗಳಾದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿವೆ. ಒಲಿ ಅವರು ತಮ್ಮ ಸಿಪಿಎನ್–ಯುಎಂಎಲ್ ಪಕ್ಷದ 121 ಸಂಸದರು ಮತ್ತು ಜನತಾ ಸಮಾಜವಾದಿ ಪಕ್ಷ–ನೇಪಾಳ (ಜೆಎಸ್‌ಪಿ–ಎನ್) ಪಕ್ಷದ 32 ಸಂಸದರ ಬೆಂಬಲ ಇದೆ ಎಂದು ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರ ಬಳಿ ಹಕ್ಕು ಮಂಡಿಸಿದ್ದಾರೆ.
ಇದಕ್ಕೂ ಮುನ್ನ ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ಡಿಯುಬಾ ಅವರು ತಮಗೆ 149 ಸಂಸದರ ಬೆಂಬಲ ಇದೆ ಎಂದು ಹೇಳಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.
ಆದರೆ ಇದೀಗ ಯಾವುದೇ ಪಕ್ಷಕ್ಕೂ ಬಹುಮತ ಇಲ್ಲದ ಕಾರಣ ಉಭಯ ನಾಯಕರ ಸರ್ಕಾರ ರಚನೆ ಹಕ್ಕು ಮನವಿಯನ್ನು ನೇಪಾಳ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ತಿರಸ್ಕರಿಸಿದ್ದು, ನೇಪಾಳ ಸಂಸತ್ತನ್ನು ವಿಸರ್ಜಿಸಿ ಮಧ್ಯಂತರ ಚುನಾವಣೆ ಘೋಷಣೆ ಮಾಡಿದ್ದಾರೆ. ಇದೇ ನವೆಂಬರ್ 12 ಮತ್ತು 19ರಂದು ಮಧ್ಯಂತರ ಚುನಾವಣೆಗೆ ಆದೇಶಿಸಿದ್ದಾರೆ.
ಇನ್ನು ಸಿಪಿನ್–ಯುಎಂಎಲ್ ಪಕ್ಷದ ಅಧ್ಯಕ್ಷ ಒಲಿ ಅವರು ಸಂವಿಧಾನದ 76(3)ನೇ ವಿಧಿ ಪ್ರಕಾರ ಮೇ 14ರಂದು ನೇಪಾಳದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದಕ್ಕೂ ನಾಲ್ಕು ದಿನ ಮುನ್ನವಷ್ಟೇ ಅವರು ಸಂಸತ್ತಿನಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು. ಅವರು 30 ದಿನದೊಳಗೆ ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಬೇಕಾಗಿತ್ತು. ಆದರೆ ಮತ್ತೆ ಸದನದಲ್ಲಿ ಈ ಪರೀಕ್ಷೆ ಎದುರಿಸುವ ಒಲವನ್ನು ಅವರು ತೋರಿರಲಿಲ್ಲ. ಹೀಗಾಗಿ ಅಧ್ಯಕ್ಷೆ ವಿದ್ಯಾದೇವಿ ಅವರು ಇತರ ರಾಜಕೀಯ ಪಕ್ಷಗಳಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಲು ಅವಕಾಶ ನೀಡಿದ್ದರು. ಇದಕ್ಕಾಗಿ ಶುಕ್ರವಾರ ಸಂಜೆ 5ರವರೆಗೆ ಗಡುವು ನಿಗದಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


