ಪಾಕಿಸ್ತಾನ: ಮೊದಲ ರಾತ್ರಿಯೇ ಗಂಡನ ಎದುರು ನವ ವಧುವಿನ ಮೇಲೆ ಗ್ಯಾಂಗ್ ರೇಪ್!
ಮದುವೆಯಾದ ಮೊದಲ ರಾತ್ರಿಯೇ ಪೊಲೀಸ್ ಸಮವಸ್ತ್ರದಲ್ಲಿದ್ದ ನಾಲ್ವರು ದರೋಡೆಕೋರರು ಗಂಡನ ಎದುರು 22 ವರ್ಷದ ನವ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಲಾಹೋರ್: ಮದುವೆಯಾದ ಮೊದಲ ರಾತ್ರಿಯೇ ಪೊಲೀಸ್ ಸಮವಸ್ತ್ರದಲ್ಲಿದ್ದ ನಾಲ್ವರು ದರೋಡೆಕೋರರು ಗಂಡನ ಎದುರು 22 ವರ್ಷದ ನವ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.
ಲಾಹೋರ್ ನಿಂದ 350 ಕಿ.ಮೀ.ದೂರದಲ್ಲಿರುವ ಮುಲ್ತಾನ್ ನಲ್ಲಿನ ಮೊಚಿಪುರದಲ್ಲಿರುವ ವರ ಮೊಹಮ್ಮದ್ ಲತೀಫ್ ನ ನಿವಾಸಕ್ಕೆ ವಧುವಿನೊಂದಿಗೆ ಮೆರವಣಿಗೆ ತಲುಪಿದಾಗ ಬುಧವಾರ ಈ ಘಟನೆ ನಡೆದಿದೆ. ಮುಂಜಾನೆ 3 ಗಂಟೆ ಸಮಯದಲ್ಲಿ ಪೊಲೀಸ್ ಸಮವಸ್ತ್ರದಲ್ಲಿದ್ದ ನಾಲ್ವರು ದರೋಡೆಕೋರರು, ಮನೆಯೊಳಗೆ ನುಗ್ಗಿದ್ದು, ಕುಟುಂಬಸ್ಥರನ್ನು ಒತ್ತೆಯಾಳಾಗಿಟ್ಟುಕೊಂಡು ಪತಿಯ ಎದುರೇ ವಧುವಿನ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಅಲ್ಲದೇ ನೂತನ ದಂಪತಿಗೆ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದರೋಡೆಕೋರರು ವಧುವಿನ ಬಳಿಯಿದ್ದ 58.3 ಗ್ರಾಮ್ ಚಿನ್ನ, ಮತ್ತು 12500 ನಗದು ದೋಚಿ ಪರಾರಿಯಾಗಿದ್ದಾರೆ. ನಂತರ ದಂಪತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ವೈದ್ಯಕೀಯ ವರದಿಯಲ್ಲಿ ರೇಪ್ ನಡೆದಿರುವುದು ದೃಢಪಟ್ಟಿದೆ. ವಧುವಿನ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತೆಯ ಮನೆಗೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿ ಕುರಾಮ್ ಆಲಿ ಶಾ ನ್ಯಾಯ ಕೊಡಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.
ಅಪರಾಧಿಗಳೇ ಈ ಕೃತ್ಯ ನಡೆಸಿದ್ದಾರೆಯೇ ಅಥವಾ ವೈಯಕ್ತಿಕ ದ್ವೇಷದಿಂದ ಇದನ್ನು ನಡೆಸಲಾಗಿದ್ದೆಯೇ ಎಂಬುದರ ಬಗ್ಗೆ ತನಿಖೆ
ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಪಂಜಾಬ್ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಉನ್ನತ ಪೊಲೀಸ್ ಅಧಿಕಾರಿಗಳಿಗೆ
ನಿರ್ದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


