ಪಿಎನ್ ಬಿ ಪ್ರಕರಣ: ನಾಪತ್ತೆಯಾಗಿದ್ದ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ
ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಆ್ಯಂಟಿಗುವಾ ಮತ್ತು ಬಾರ್ಬುಡಾದಿಂದಲೂ ಚೋಕ್ಸಿ ದಿಢೀರ್ ನಾಪತ್ತೆಯಾಗಿದ್ದ. ಚೋಕ್ಸಿ ವಿರುದ್ಧ ಇಂಟರ್‌ಪೋಲ್ ಯೆಲ್ಲೋ ನೋಟಿಸ್ ಜಾರಿಗೊಳಿಸಿತ್ತು. ಈತನ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದರು. ಇದೀಗ ಮಂಗಳವಾರ ರಾತ್ರಿ ಚೋಕ್ಸಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬೋಟ್ ನಲ್ಲಿ ಪರಾರಿಯಾಗುವ ವೇಳೆ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದಿರುವ ಚೋಕ್ಸಿ 2018 ರಿಂದ ಅಲ್ಲಿಯೇ ವಾಸ್ತವ್ಯ ಹೂಡಿದ್ದ. ದ್ವೀಪದ ದಕ್ಷಿಣ ಪ್ರದೇಶದಲ್ಲಿ ಭಾನುವಾರ ತನ್ನ ವಾಹನದಲ್ಲಿ ಕಾಣಿಸಿಕೊಂಡಿದ್ದ. ನಂತರ, ಆತನ ವಾಹನ ಮಾತ್ರ ಪತ್ತೆಯಾಗಿತ್ತು. ಭಾನುವಾರದಿಂದ ಚೋಕ್ಸಿ ಸುಳಿವು ಸಿಕ್ಕಿರಲಿಲ್ಲ ಎಂದು ಅವರ ವಕೀಲ ವಿಜಯ್ ಅಗರ್ವಾಲ್ ದೃಢಪಡಿಸಿದ್ದರು.
ಇನ್ನು ಪಿಎನ್ ಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಆ್ಯಂಟಿಗುವಾ ಸರ್ಕಾರವನ್ನು ಕೇಳಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಭಾನುವಾರ ಸಂಜೆ ಚೋಕ್ಸಿ ಕಾರಿನಲ್ಲಿ ತೆರಳಿ ನಿಗೂಢ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಇದೀಗ ಚೋಕ್ಸಿಯನ್ನು ಬಂಧಿಸಿರುವ ಸ್ಥಳೀಯ ಪೊಲೀಸರು ಆಂಟಿಗುವಾ ಮತ್ತು ಬಾರ್ಬುಡಾದ ರಾಯಲ್ ಪೊಲೀಸ್ ಪಡೆಗೆ ಚೋಕ್ಸಿಯನ್ನು ಹಸ್ತಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


