ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ - ಜೈಶಂಕರ್ ಭೇಟಿ: ಪರಸ್ಪರ ಸಹಕಾರ, ಹವಾಮಾನ ಬದಲಾವಣೆ ಕುರಿತು ಚರ್ಚೆ
ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿದರು.

ವಾಷಿಂಗ್ಟನ್: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಪರಸ್ಪರ ಸಹಕಾರ ಸೇರಿದಂತೆ ಹಲವು ವಿಷಗಳ ಕುರಿತು ಚರ್ಚೆ ನಡೆಸಿದರು. ಈ ಸಭೆ ಅಮೆರಿಕ-ಭಾರತ ನಡುವಿನ ಸಂಬಂಧ ವೃದ್ಧಿಗೆ ಅಡಿಪಾಯ ಎಂದು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ.
ಸಾಂಕ್ರಾಮಿಕ ಅಂತ್ಯಕ್ಕೆ ಸಹಕಾರ, ಇಂಡೋ-ಪೆಸಿಫಿಕ್ ಅನ್ನು ಮುಕ್ತವಾಗಿ ಬೆಂಬಲಿಸುವುದು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಜಾಗತಿಕ ನಾಯಕತ್ವವನ್ನು ಒದಗಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು.
ಜೋ ಬಿಡನ್ ಅವರು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಸಚಿವ ಜೈಶಂಕರ್ ಅವರು ಗುರುವಾರ ಸುಲಿವನ್ ಅವರನ್ನು ಭೇಟಿಯಾದರು.
"ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿ ಸಂತೋಷವಾಯಿತು. ಇಂಡೋ-ಪೆಸಿಫಿಕ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಹಲವು ವಿಷಗಳ ಬಗ್ಗೆ ಚರ್ಚಿಸಿದೆವು. ಕೋವಿಡ್ ಸವಾಲನ್ನು ಎದುರಿಸುವಲ್ಲಿ ಅಮೆರಿಕದ ಒಗ್ಗಟ್ಟಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.
ಭಾರತ-ಅಮೆರಿಕ ಲಸಿಕೆ ಸಹಭಾಗಿತ್ವವು ನಿಜವಾದ ಬದಲಾವಣೆಯನ್ನು ತರಬಲ್ಲದು ಎಂದು ಜೈಶಂಕರ್ ಸಭೆಯ ನಂತರ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
"ನಮ್ಮ ಜನರಿಂದ ಜನರ ಸಂಬಂಧಗಳು ಮತ್ತು ನಮ್ಮ ಮೌಲ್ಯಗಳು ಅಮೆರಿಕ-ಭಾರತ ಸಹಭಾಗಿತ್ವದ ಅಡಿಪಾಯವಾಗಿದ್ದು, ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು, ಹವಾಮಾನ ಬದಲಾವಣೆ ಮುನ್ನಡೆಸಲು ಮತ್ತು ಮುಕ್ತವಾಗಿ ಇಂಡೋ-ಪೆಸಿಫಿಕ್ ಅನ್ನು ಬೆಂಬಲಿಸಲು ನಮಗೆ ಸಹಾಯ ಮಾಡುತ್ತದೆ" ಎಂದು ಸುಲಿವನ್ ಅವರು ಸಭೆಯ ನಂತರ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


