ಜಾಗತಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿ-20 ಶೃಂಗಸಭೆ 'ಫಲಪ್ರದ': ಪ್ರಧಾನಿ ಮೋದಿ
ರೋಮ್ ನಲ್ಲಿ ನಡೆದ ಎರಡು ದಿನಗಳ ಜಿ-20 ಶೃಂಗಸಭೆ "ಫಲಪ್ರದ"ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಣ್ಣಿಸಿದ್ದಾರೆ.

ರೋಮ್: ರೋಮ್ ನಲ್ಲಿ ನಡೆದ ಎರಡು ದಿನಗಳ ಜಿ-20 ಶೃಂಗಸಭೆ "ಫಲಪ್ರದ"ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಣ್ಣಿಸಿದ್ದಾರೆ.
‘ರೋಮ್‌ನಲ್ಲಿ ನಡೆದ ಜಿ-20 ರಾಷ್ಟ್ರಗಳ ಶೃಂಗಸಭೆ ಫಲಪ್ರದವಾಗಿದೆ. ಈ ಶೃಂಗಸಭೆಯ ನಂತರ ನಾವು ಗ್ಲಾಸ್ಗೊಗೆ ಹೊರಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಶೃಂಗಸಭೆಯಲ್ಲಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದು, ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸುವುದು, ಆರ್ಥಿಕ ಸಹಕಾರವನ್ನು ಹೆಚ್ಚಿಸುವುದು ಮತ್ತು ಆವಿಷ್ಕಾರದತ್ತ ಗಮನಹರಿಸುವುದು ಸೇರಿದಂತೆ ಜಾಗತಿಕ ಪ್ರಾಮುಖ್ಯತೆಯ ಹಲವು ವಿಷಯಗಳ ಕುರಿತು ವಿಶ್ವ ನಾಯಕರು ವಿಸ್ತೃತವಾದ ಚರ್ಚೆ ನಡೆಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಜಿ20 ಸಮಿತಿಯ ನಾಯಕರು ಎರಡು ದಿನಗಳ ಶೃಂಗಸಭೆಯಲ್ಲಿ ಪ್ರಕಟಿಸಲಾದ 'ರೋಮ್ ಘೋಷಣೆ'ಯನ್ನು ಅಳವಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದರು. ಮಾತ್ರವಲ್ಲ, ‘ಕೋವಿಡ್-19‘ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಜಾಗತಿಕವಾಗಿ ಒಳಿತಾಗುತ್ತದೆ ಎಂದು ಒಪ್ಪಿಕೊಳ್ಳುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿನ ಬೆಳವಣಿಗೆಗಳ ಕುರಿತು ಪರಿಣಾಮಕಾರಿ ಸಂದೇಶವನ್ನು ನೀಡಿದ್ದಾರೆ.
ಇಂಧನ ಮತ್ತು ಹವಾಮಾನ ಈ ಎರಡೂ ವಿಷಯಗಳ ಬಗ್ಗೆ ಜಿ20 ಶೃಂಗಸಭೆಯಲ್ಲಿ ಹೆಚ್ಚು ಚರ್ಚೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


