ಐಎಸ್ ನಿಂದ ಕಾಬೂಲ್ ನಲ್ಲಿ ಅವಳಿ ಬಾಂಬ್ ಸ್ಫೋಟ; 50 ಮಂದಿಗೆ ಗಾಯ 19 ಕ್ಕೂ ಹೆಚ್ಚು ಸಾವು
ಕಾಬೂಲ್ ನಲ್ಲಿ ನ.02 ರಂದು ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.

ಕಾಬೂಲ್: ಕಾಬೂಲ್ ನಲ್ಲಿ ನ.02 ರಂದು ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.
ಕಾಬೂಲ್ ನ ಪಿಡಿ10 ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದರ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಟಾಲಿಯನ್ ಮಾನವೀಯ ಸಂಘಟನೆಯೊಂದು ಟ್ವೀಟ್ ಮೂಲಕ ತಿಳಿಸಿದೆ.
ಅಫ್ಘಾನಿಸ್ತಾನದ ರಾಜಧಾನಿಯ ಆಸ್ಪತ್ರೆಯ ಮೇಲೆ ದಾಳಿ ನಡೆದಿದ್ದು, ಇಸ್ಲಾಮಿಕ್ ಸ್ಟೇಟ್ ನಿಂದ ಈ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಸ್ಪುಟ್ನಿಕ್ ವರದಿ ಪ್ರಕಟಿಸಿದೆ.
ಆಸ್ಪತ್ರೆಯ ಮುಂಭಾಗದಲ್ಲಿ ಐಎಸ್ ನ ಉಗ್ರನೋರ್ವ ಆತ್ಮಾಹುತಿ ದಾಳಿ ನಡೆಸಿದ್ದು, ಇನ್ನೂ ಹಲವು ದಾಳಿಕೋರರು ಆಸ್ಪತ್ರೆಯನ್ನು ಪ್ರವೇಶಿಸಿದ್ದು ತಾಲೀಬಾನ್ ನೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


