ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಲಾಹೋರ್ ಫಸ್ಟ್
ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.

ಇಸ್ಲಾಮಾಬಾದ್: ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.
ಪಾಕಿಸ್ತಾನದ ರಾಜಧಾನಿ ಲಾಹೋರ್ನಲ್ಲಿ ಬುಧವಾರ ವಾಯು ಗುಣಮಟ್ಟ ಸೂಚ್ಯಂಕವು 600ಕ್ಕೂ ಹೆಚ್ಚು ಪ್ರಮಾಣದಲ್ಲಿ ದಾಖಲಾಗಿದೆ. ಪಟ್ಟಿಯಲ್ಲಿ ಕರಾಚಿ ಐದನೇ ಸ್ಥಾನದಲ್ಲಿದೆ. ಕಳೆದ ವರ್ಷ ಕೂಡ ಲಾಹೋರ್ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ ಪಡೆದಿತ್ತು.
ಲಾಹೋರ್ನ ಗುಲ್ಬರ್ಗ್ ನಲ್ಲಿ 681, ರೈವಿಂಡ್ ನಲ್ಲಿ 626, ಅನಾರ್ಕಲಿ ಮಾರುಕಟ್ಟೆಯಲ್ಲಿ 541 ಮತ್ತು ಮಾಡೆಲ್ ಟೌನ್ ನಲ್ಲಿ 532 ಮಟ್ಟ ದಾಖಲಾಗಿದೆ ಎಂದು SAMAA TV ವರದಿ ಮಾಡಿದೆ.
ಈ ನಡುವೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹೊಗೆ ಆವರಿಸಿರುವುದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


