ಕರ್ತಾರ್‌ಪುರ ಕಾರಿಡಾರ್ ಪುನರಾರಂಭ: ಭಾರತದ ನಿರ್ಧಾರವನ್ನು ಸ್ವಾಗತಿಸಿದ ಪಾಕಿಸ್ತಾನದ ಸಿಖ್ ಸಂಸ್ಥೆ
ಕರ್ತಾರ್‌ಪುರ ಕಾರಿಡಾರ್ ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮಂಗಳವಾರ ಸ್ವಾಗತಿಸಿದೆ,

ಲಾಹೋರ್: ಕರ್ತಾರ್‌ಪುರ ಕಾರಿಡಾರ್ ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮಂಗಳವಾರ ಸ್ವಾಗತಿಸಿದೆ, ಇದು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಕೊನೆಯ ನಿವಾಸಕ್ಕೆ ಯಾವುದೇ ಅಡೆತಡೆಯಿಲ್ಲದೆ ಭೇಟಿ ನೀಡಲು ಭಾರತೀಯ ಸಿಖ್ಖರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದೆ.
ಕರ್ತಾರ್‌ಪುರ ಕಾರಿಡಾರ್ ಅನ್ನು ಬುಧವಾರದಿಂದ ಪುನರಾರಂಭಿಸುವುದಾಗಿ ಭಾರತ ಮಂಗಳವಾರ ಘೋಷಿಸಿದೆ. ಸಿಖ್ ಧರ್ಮದ ಸ್ಥಾಪಕ ಗುರುನಾನಕ್ ದೇವ್ ಅವರು ಅಂತಿಮ ಕ್ಷಣಗಳನ್ನು ಕಳೆದ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್ ನಿಂದ ಗುರುದಾಸ್ ಪುರ ಜಿಲ್ಲೆಯ ದೇರಾ ಬಾಬಾ ನಾನಕ್ ದೇಗುಲಕ್ಕೆ ಈ ಕರ್ತಾರ್ ಪುರ್ ಕಾರಿಡಾರ್ ಸಂಪರ್ಕ ಕಲ್ಪಿಸುತ್ತದೆ.
ಕಾರಿಡಾರ್ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್, ಗುರುನಾನಕ್ ದೇವ್ ಅವರ ಅಂತಿಮ ವಿಶ್ರಾಂತಿ ಸ್ಥಳವನ್ನು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲಕ್ಕೆ ಸಂಪರ್ಕಿಸುತ್ತದೆ.
ಗುರುನಾನಕ್ ಜನ್ಮ ದಿನಾಚರಣೆಗೆ ಇನ್ನೂ ಮೂರು ದಿನಗಳು ಬಾಕಿಯಿರುವಂತೆಯೇ ಈ ಕಾರಿಡಾರ್ ಪುನರಾರಂಭಿಸುವ ಭಾರತ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇದರಿಂದ ಭಾರತದ ಪಂಜಾಬ್ ನಿಂದ ಸಿಖ್ಖರು ಕರ್ತಾರ್ ಪುರ ಗುರುದ್ವಾರಕ್ಕೆ ಬರಲು ಅವಕಾಶವಾಗುತ್ತದೆ ಎಂದು ಪಾಕಿಸ್ತಾನ ಸಿಖ್ ಗುರುದ್ವಾರ ಪ್ರಬಂಧಕ ಸಮಿತಿ ಅಧ್ಯಕ್ಷ ಸರ್ದಾರ್ ಅಮೀರ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


