ವಿದೇಶ

ಪರಮಾಣು ತಂತ್ರಜ್ಞಾನವನ್ನು ಅಕ್ರಮವಾಗಿ ಇರಾನ್, ಲಿಬಿಯಾ, ಉತ್ತರ ಕೊರಿಯಾಗೆ ಮಾರಾಟ ಮಾಡಿದ್ದ ಪಾಕ್ ಅಣು ವಿಜ್ಞಾನಿ ಎ.ಕ್ಯು ಖಾನ್ ನಿಧನ

ಎ.ಕ್ಯು ಖಾನ್ ಅವರು ಜನಿಸಿದ್ದು ಮಧ್ಯಪ್ರದೇಶದ ಭೂಪಾಲ್ ನಲ್ಲಿ. 1947ರಲ್ಲಿ ಭಾರತ ಪಾಕ್ ವಿಭಜನೆ ಸಂದರ್ಭದಲ್ಲಿ ಖಾನ್ ಪಾಲಕರು ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು.

ಪರಮಾಣು ತಂತ್ರಜ್ಞಾನವನ್ನು ಅಕ್ರಮವಾಗಿ ಇರಾನ್, ಲಿಬಿಯಾ, ಉತ್ತರ ಕೊರಿಯಾಗೆ ಮಾರಾಟ ಮಾಡಿದ್ದ ಪಾಕ್ ಅಣು ವಿಜ್ಞಾನಿ ಎ.ಕ್ಯು ಖಾನ್ ನಿಧನ
ಅಬ್ದುಲ್ ಖಾದಿರ್ ಖಾನ್
Published On :

ಇಸ್ಲಾಮಾಬಾದ್: ಪಾಕಿಸ್ತಾನದ ನ್ಯೂಕ್ಲಿಯರ್ ಬಾಂಬ್ ಪಿತಾಮಹ ಎಂದೇ ಹೆಸರಾಗಿದ್ದ ಅಣುವಿಜ್ಞಾನಿ ಅಬ್ದುಲ್ ಖಾದಿರ್ ಖಾನ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಶ್ವಾಸಕೋಶ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಇಸ್ಲಾಮಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಖಾದಿರ್ ಖಾನ್ ನಿಧನಕ್ಕೆ ಪ್ರಧಾನಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದಾರೆ. ಪಾಕಿಸ್ತಾನದಲ್ಲಿ ಎ.ಕ್ಯು ಖಾನ್ ಅವರನ್ನು ರಾಷ್ಟ್ರೀಯ ನಾಯಕನಂತೆ ಕಾಣುತ್ತಿದ್ದರು. ಪಾಕ್ ದೇಶವನ್ನು ಜಗತ್ತಿನ ಮೊತ್ತ ಮೊದಲ ನ್ಯೂಕ್ಲಿಯರ್ ಬಾಂಬ್ ಹೊಂದಿದ ಇಸ್ಲಾಮಿಕ್ ರಾಷ್ಟ್ರವಾಗಿಸಿದ ಶ್ರೇಯ ಖಾನ್ ಅವರದು.

ಸ್ವದೇಶದಲ್ಲಿ ಅವರನ್ನು ಹೀರೋ ನಂತೆ ಕಂಡರೂ ಅಂತಾರಾಷ್ಟ್ರೀಯ ಮಟ್ತದಲ್ಲಿ ಅವರ ಇಮೇಜ್ ಚೆನ್ನಾಗಿರಲಿಲ್ಲ. ಅವರನ್ನು ಅಪಾಯಕಾರಿ ವ್ಯಕ್ತಿ ಎಂದು ಪರಿಗಣಿಸಲಾಗಿತ್ತು. ಇರಾನ್, ಲಿಬಿಯಾ, ಉ.ಕೊರಿಯಾಗೆ ಪರಮಾಣು ತಂತ್ರಜ್ಞಾನವನ್ನು ಮಾರಾಟ ಮಾಡಿದ ಕಳಂಕ ಅವರ ಬೆನ್ನಿಗಂಟಿತ್ತು. 

ಎ.ಕ್ಯು ಖಾನ್ ಅವರು ಜನಿಸಿದ್ದು 1936, ಮಧ್ಯಪ್ರದೇಶದ ಭೂಪಾಲ್ ನಲ್ಲಿ. 1947ರಲ್ಲಿ ಭಾರತ ಪಾಕ್ ವಿಭಜನೆ ಸಂದರ್ಭದಲ್ಲಿ ಖಾನ್ ಪಾಲಕರು ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು.

Related Article

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಪ್ರಜೆ ಬಂಧನ: 6 ಕೆಜಿ ಹೆರಾಯಿನ್ ವಶ

ಪಾಕಿಸ್ತಾನ: ಧರ್ಮ ನಿಂದನೆ ಎಸಗಿದ್ದ ಮಹಿಳೆಗೆ ಮರಣದಂಡನೆ

ಭಯೋತ್ಪಾದಕರಿಗೆ ಪಾಕಿಸ್ತಾನ ಆಶ್ರಯ, ಬೆಂಬಲ; ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು: ಪ್ರಧಾನಿ ಮೋದಿ ಜೊತೆ ಕಮಲಾ ಹ್ಯಾರಿಸ್ ಉಲ್ಲೇಖ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!

ಇದಕ್ಕಿಂತ ಹೆಚ್ಚಿನ ಆಫ್ಘನ್ ನಿರಾಶ್ರಿತರಿಗೆ ಆಶ್ರಯ ನೀಡುವ ಸಾಮರ್ಥ್ಯ ಪಾಕಿಸ್ತಾನಕ್ಕಿಲ್ಲ: ಪಾಕ್ ಭದ್ರತಾ ಸಲಹೆಗಾರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.