ಬಾಂಗ್ಲಾದೇಶ: ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಅಪರಿಚಿತರು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಅಪರಿಚಿತರು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಗುಂಪೊಂದು ದೇವಸ್ಥಾನದ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ 22 ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಹಲವು ಭಾಗಗಳಲ್ಲಿ ಇದೇ ಮಾದರಿಯ ಪ್ರಕರಣಗಳು ವರದಿಯಾಗುತ್ತಿವೆ. ಸುಮಾರು 22 ಜಿಲ್ಲೆಗಳ ದೇವಾಲಯಗಳ ಮೇಲೆ ಅಪರಿಚಿತರು ದಾಳಿ ನಡೆಸಿ, ದೇಗುಲಗಳನ್ನು ಧ್ವಂಸಗೊಳಿಸುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಬಿತ್ತರಿಸುತ್ತಿವೆ.
ಬಾಂಗ್ಲಾದೇಶದ ಸ್ಥಳೀಯ ಮಾಧ್ಯಮಗಳ ಪ್ರಕಾರ, ದುರ್ಗಾ ದೇವಿಯ ದೇವಸ್ಥಾನದಲ್ಲಿ ಹಿಂಸಾಚಾರ ನಡೆದ ಬಳಿಕ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಚಂದ್ಪುರದ ಹಜಿಗಂಜ್, ಚತ್ತೋಗ್ರಾಂನ ಬಾಂಶ್ಖಲಿ ಮತ್ತು ಕಾಕ್ಸ್ ಬಜಾರ್ನ ಪೆಕುವಾದಲ್ಲಿ ಕೂಡ ಹಿಂದೂ ದೇವಾಲಯಗಳಲ್ಲಿ ದಾಂಧಲೆ ಎಬ್ಬಿಸಿರುವ ಘಟನೆ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


