ಸಿರಿಯಾದಲ್ಲಿ ವೈಮಾನಿಕ ದಾಳಿ: ಅಲ್-ಖೈದಾ ಹಿರಿಯ ನಾಯಕನ ಹತ್ಯೆಗೈದ ಅಮೆರಿಕಾ
ಸಿರಿಯಾದಲ್ಲಿ ವೈಮಾನಿಕ ದಾಳಿ ನಡೆಸಿರುವ ಅಮೆರಿಕಾ ಸೇನಾಪಡೆ ಅಲ್-ಖೈದಾ ಹಿರಿಯ ನಾಯಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ವಾಷಿಂಗ್ಟನ್: ಸಿರಿಯಾದಲ್ಲಿ ವೈಮಾನಿಕ ದಾಳಿ ನಡೆಸಿರುವ ಅಮೆರಿಕಾ ಸೇನಾಪಡೆ ಅಲ್-ಖೈದಾ ಹಿರಿಯ ನಾಯಕನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ವಾಯುವ್ಯ ಸಿರಿಯಾದಲ್ಲಿ ಅಲ್-ಖೈದಾ ಹಿರಿಯ ನಾಯಕ ಅಬ್ದುಲ್ ಹಮೀದ್ ಅಲ್-ಮತಾರ್ನನ್ನು ವೈಮಾನಿಕ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಸೆಂಟ್ರಲ್ ಕಮಾಂಡ್ ವಕ್ತಾರ ಮೇಜರ್ ಜಾನ್ ರಿಗ್ಸ್ಬೀ ಹೇಳಿದ್ದಾರೆ.
ಎಂಕ್ಯೂ-9 ವಿಮಾನವನ್ನು ಬಳಸಿ ನಡೆಸಲಾದ ವೈಮಾನಿಕ ದಾಳಿಯಲ್ಲಿ ನಾಗರಿಕರ ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿಗಳಿಲ್ಲ.
ಅಲ್-ಖೈದಾ ಸಿರಿಯಾವನ್ನು ಪುನರ್ ನಿರ್ಮಾಣ ಮಾಡಲು, ಬಾಹ್ಯ ಅಂಗಸಂಸ್ಥೆಗಳೊಂದಿಗೆ ಸಂಯೋಜಿಸಲು ಮತ್ತು ಬಾಹ್ಯ ಕಾರ್ಯಾಚರಣೆಗಳನ್ನು ಯೋಜಿಸಲು ಸುರಕ್ಷಿತ ತಾಣವಾಗಿ ಬಳಸುತ್ತದೆ. ಭಯೋತ್ಪಾದಕ ಸಂಘಟನೆಯು ಅಮೆರಿಕಾದ ನಾಗರಿಕರು, ನಮ್ಮ ಪಾಲುದಾರರು ಮತ್ತು ಮುಗ್ಧ ನಾಗರಿಕರನ್ನು ಬೆದರಿಸುವ ಕೆಲಸ ಮಾಡುತ್ತಿದೆ ಹೇಳಿದರು.
ತಾಯ್ನಾಡಿಗೆ ಹಾನಿ ಮಾಡುವ ಉದ್ದೇಶ ಹೊಂದಿರುವ ಅಲ್-ಖೈದಾ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ಸದಸ್ಯರನ್ನು ಗುರಿಯಾಗಿಸುವುದನ್ನು ಅಮೆರಿಕಾ ಮುಂದುವರಿಸುತ್ತದೆ ಎಂದು ರಿಗ್ಸ್ಬೀ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


