ಶಾಕಿಂಗ್! 2025 ರವರೆಗೆ ಕಡಿಮೆ ಆಹಾರ ಸೇವಿಸಿ ಎಂದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್
ಹದಗೆಡುತ್ತಿರುವ ಆರ್ಥಿಕತೆಯ ಮಧ್ಯೆ ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಎದುರಾಗಿದೆ. ಅಲ್ಲದೇ ಅಗತ್ಯ ಔಷಧಿಗಳ ಕೊರತೆ ಉಂಟಾಗಿದೆ. ಹೀಗಾಗಿ ಟೈಫಾಯಿಡ್ ಜ್ವರದಂತಹ ರೋಗಗಳ ಹರಡುವಿಕೆಯನ್ನು ತಡೆಯಲು ಅಲ್ಲಿನ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ.

ಪ್ಯೊಂಗ್ಯಾಂಗ್: ಹದಗೆಡುತ್ತಿರುವ ಆರ್ಥಿಕತೆಯ ಮಧ್ಯೆ ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಎದುರಾಗಿದೆ. ಅಲ್ಲದೇ ಅಗತ್ಯ ಔಷಧಿಗಳ ಕೊರತೆ ಉಂಟಾಗಿದೆ. ಹೀಗಾಗಿ ಟೈಫಾಯಿಡ್ ಜ್ವರದಂತಹ ರೋಗಗಳ ಹರಡುವಿಕೆಯನ್ನು ತಡೆಯಲು ಅಲ್ಲಿನ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ.
ಆಹಾರ ಬಿಕ್ಕಟ್ಟು ಹಿನ್ನೆಲೆ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಅಲ್ಲಿನ ನಾಗರಿಕರಿಗೆ 2025ರವರೆಗೆ ಕಡಿಮೆ ಆಹಾರ ಸೇವಿಸುವಂತೆ ಕರೆ ನೀಡಿದ್ದಾರೆ. ಆಹಾರ ಬಿಕ್ಕಟ್ಟು 2025 ರವರೆಗೆ ಮುಂದುವರೆಯುತ್ತದೆ ಎಂದು ನೆರೆಹೊರೆಯ ವಾಚ್ ಘಟಕದ ಸಭೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ.
ನೋಟ್ಗಳನ್ನು ಮುದ್ರಿಸಲು ಬೇಕಾಗುವ ಕಾಗದ ಮತ್ತು ಶಾಯಿಯನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ತಾತ್ಕಾಲಿಕ ಕರೆನ್ಸಿಯನ್ನು ನೀಡುವಂತೆ ಉತ್ತರ ಕೊರಿಯಾದ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


