ವಿದೇಶ

ಇದೇ 24ರಂದು ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌- ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 24 ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿ ಮಾಡಲಿದ್ದಾರೆ.

ಇದೇ 24ರಂದು ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌- ಪ್ರಧಾನಿ ಮೋದಿ ಭೇಟಿ
ಜೋ ಬೈಡೆನ್-ಪ್ರಧಾನಿ ಮೋದಿ
Published On :

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 24 ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿ ಮಾಡಲಿದ್ದಾರೆ.

ಸಭೆಯಲ್ಲಿ, ಉಭಯ ದೇಶಗಳಿಗೆ ಸಂಬಂಧಿಸಿದ ದ್ವಿಪಕ್ಷೀಯ ವಿಷಯಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ ಎಂದು ಶ್ವೇತ ಭವನದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಜೋ ಬೈಡೆನ್ ಅವರೊಂದಿಗಿನ ಸಭೆಗೆ ಮುನ್ನ ಪ್ರಧಾನಿ ಮೋದಿ ಶ್ವೇತ ಭವನದಲ್ಲಿ ಕ್ವಾಡ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. 

ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳು, ಇಂಡೋ-ಪೆಸಿಫಿಕ್ ಸಂಬಂಧಗಳು, ಕೊರೋನಾ ಸಾಂಕ್ರಾಮಿಕ, ಹವಾಮಾನ ಬದಲಾವಣೆ ಮತ್ತಿತರ ಅಂಶಗಳ ಬಗ್ಗೆ  ಅವರೊಂದಿಗೆ ಚರ್ಚಿಸಲಿದ್ದಾರೆ.

ಈ ಸಭೆಗೂ ಮುನ್ನ ಈ ತಿಂಗಳ 23ರಂದು ಜಪಾನ್ ಹಾಗೂ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಗಳನ್ನು ಮೋದಿ ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.