ವಿದೇಶ

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ನಿರ್ದೇಶಕ ಹಮೀದ್ ಶಿನ್ವಾರಿ ವಜಾಗೊಳಿಸಿದ ತಾಲಿಬಾನ್

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಹಮೀದ್ ಶಿನ್ವಾರಿ ಅವರನ್ನು ತಾಲಿಬಾನ್ ವಜಾ ಮಾಡಿದೆ.

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ನಿರ್ದೇಶಕ ಹಮೀದ್ ಶಿನ್ವಾರಿ ವಜಾಗೊಳಿಸಿದ ತಾಲಿಬಾನ್
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ
Published On :

ಕಾಬೂಲ್: ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಹಮೀದ್ ಶಿನ್ವಾರಿ ಅವರನ್ನು ತಾಲಿಬಾನ್ ವಜಾ ಮಾಡಿದೆ.

ಈ ಕುರಿತು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ಶಿನ್ವಾರಿ ಅವರು, ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ತಮ್ಮನ್ನು ತೆಗೆದು ಹಾಕಲಾಗಿದ್ದು, ತಮ್ಮ ಸ್ಥಾನಕ್ಕೆ ತಾಲಿಬಾನ್ ನ ಹೊಸ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿಯ ಕಿರಿಯ ಸಹೋದರ ಅನಸ್ ಹಕ್ಕಾನಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

ನನ್ನನ್ನು ವಜಾಗೊಳಿಸಲು ಯಾವುದೇ ಕಾರಣ ನೀಡಿಲ್ಲ. ಆದರೆ ನನ್ನ ಸ್ಥಾನಕ್ಕೆ ನಸೀಬುಲ್ಲಾ ಹಕ್ಕಾನಿ ಅವರನ್ನು ನೇಮಿಸಲಾಗಿದೆ ಎಂದು ಮಾತ್ರ ತಿಳಿಸಿರುವುದಾಗಿ ಹಮೀದ್ ಶಿನ್ವಾರಿ ಹೇಳಿದ್ದಾರೆ.

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯೂ ತನ್ನ ಅಧಿಕೃತ ಫೇಸ್ಬುಕ್ ಪೇಜ್ ನಲ್ಲಿ ಹೊಸ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಸೀಬುಲ್ಲಾ ಹಕ್ಕಾನಿ ಅವರು ನೇಮಕಗೊಂಡಿದ್ದಾರೆ ಎಂದು ಪ್ರಕಟಿಸಿದೆ.

ಕ್ರೀಡೆಗಳಿಂದ ಮಹಿಳೆಯರನ್ನು ನಿಷೇಧಿಸುವ ತಾಲಿಬಾನ್ ಆದೇಶಕ್ಕೆ ಕ್ರಿಕೆಟ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಹಿನ್ನಡೆಗೆ ಕಾರಣವಾಗಿದೆ. ಅಫ್ಘಾನಿಸ್ತಾನದಲ್ಲಿ ಮಹಿಳೆಯರನ್ನು ಕ್ರೀಡೆಗಳಿಂದ ನಿಷೇಧಿಸಿದ್ದನ್ನು ವಿರೋಧಿಸಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಕಳೆದ ವಾರ ಅಫ್ಘಾನಿಸ್ತಾನ ಕ್ರಿಕೆಟ್ ತಂಡದೊಂದಿಗಿನ ಪಂದ್ಯವನ್ನು ರದ್ದುಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.