ಟಿ-20 ವಿಶ್ವಕಪ್ ನಲ್ಲಿ ಭಾರತ ವಿರುದ್ಧ ಗೆಲುವು ಇಸ್ಲಾಂಗೆ ಸಂದ ಜಯ: ಪಾಕ್ ಸಚಿವನ ಹೇಳಿಕೆಯ ವಿಡಿಯೋ ವೈರಲ್
ಟಿ-20 ವಿಶ್ವಕಪ್ ನಲ್ಲಿ ದಾಯಾದಿ ದೇಶಗಳ ನಡುವೆ ನಿನ್ನೆ ನೆಡೆದ ರೋಚಕ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಸಚಿವರೊಬ್ಬರು ಹಿಂದೂರಾಷ್ಟ್ರವನ್ನು ಕೆಣಕುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ.

ಇಸ್ಲಾಮಾಬಾದ್: ಟಿ-20 ವಿಶ್ವಕಪ್ ನಲ್ಲಿ ದಾಯಾದಿ ದೇಶಗಳ ನಡುವೆ ನಿನ್ನೆ ನೆಡೆದ ರೋಚಕ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಸಚಿವರೊಬ್ಬರು ಹಿಂದೂರಾಷ್ಟ್ರವನ್ನು ಕೆಣಕುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ.
ಭಾರತ ವಿರುದ್ಧ ಪಾಕ್ ಸಾಧಿಸಿರುವ ಗೆಲುವನ್ನು "ಇಸ್ಲಾಂಗೆ ಸಂದ ಜಯ" ಎಂದು ಅವರು ಬಣ್ಣಿಸಿದ್ದಾರೆ. ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ಸಖತ್ ವೈರಲ್ ಆಗುತ್ತಿದೆ.
ಟೀಂ ಇಂಡಿಯಾ ವಿರುದ್ಧ ಪಾಕ್ ಜಯ ಸಾಧಿಸುತ್ತಿದ್ದಂತೆಯೇ ಪಾಕ್ ಸಚಿವ ಶೇಖ್ ರಶೀದ್ ಅಹ್ಮದ್ ‘ಭಾರತ-ಪಾಕ್ ನಡುವೆ ಪಂದ್ಯ ನಡೆಯುತ್ತಿದ್ದ ಸಮಯದಲ್ಲಿ ಭಾರತ ಸೇರಿದಂತೆ ಜಗತ್ತಿನಾದ್ಯಂತ ಮುಸ್ಲಿಮರು ಪಾಕಿಸ್ತಾನ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿ, ನಾವೇ ಗೆಲ್ಲಬೇಕೆಂದು ಪ್ರಾರ್ಥಿಸಿದ್ದಾರೆ. ಪಾಕಿಸ್ತಾನದ ಜನರಿಗೆ ನಿನ್ನೆ ನಡೆದ ಪಂದ್ಯವೇ ಫೈನಲ್ ಆಗಿದೆ. ಇದು ಪಾಕಿಸ್ತಾನದ ಗೆಲುವಲ್ಲ, ಇಸ್ಲಾಮಿನ ಗೆಲುವು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


