ಉಕ್ರೇನ್ ಅಣುಘಟಕದ ತಪಾಸಣೆಯ ತುರ್ತು ಅಗತ್ಯವಿದೆ: ನ್ಯಾಟೋ
ರಷ್ಯಾ ಸೇನಾ ನಿಯಂತ್ರಣದಲ್ಲಿರುವ ಉಕ್ರೇನ್ ನ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರವನ್ನು ತಪಾಸಣೆ ಮಾಡುವುದಕ್ಕೆ ವಿಶ್ವಸಂಸ್ಥೆಯ ಅಣು ಕಾವಲುಗಾರ ಸಂಸ್ಥೆಗೆ ಅವಕಾಶ ನೀಡಬೇಕು ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ರಷ್ಯಾ ಸೇನಾ ನಿಯಂತ್ರಣದಲ್ಲಿರುವ ಉಕ್ರೇನ್ ನ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರವನ್ನು ತಪಾಸಣೆ ಮಾಡುವುದಕ್ಕೆ ವಿಶ್ವಸಂಸ್ಥೆಯ ಅಣು ಕಾವಲುಗಾರ ಸಂಸ್ಥೆಗೆ ಅವಕಾಶ ನೀಡಬೇಕು ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.
ಈ ಅಣು ವಿದ್ಯುತ್ ಸ್ಥಾವರವನ್ನು ರಷ್ಯಾ ಆಕ್ರಮಿಸಿಕೊಂಡಿರುವುದು ಈ ಸ್ಥಾವರದ ಸುರಕ್ಷತೆ ಹಾಗೂ ಭದ್ರತೆಗೆ ಅಪಾಯ ಉಂಟು ಮಾಡುವ ಅಣು ಅಪಘಾತ ಅಥವಾ ಘಟನೆಗಳ ಸಾಧ್ಯತೆ ಇದೆ ಎಂದು ವರದಿಗಾರರಿಗೆ ಬ್ರರಸೆಲ್ಸ್ ನಲ್ಲಿ ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ) ತಪಾಸಣೆಗೆ ಅವಕಾಶ ಮಾಡಿಕೊಡುವುದರ ತುರ್ತು ಅಗತ್ಯವಿದ್ದು, ರಷ್ಯಾದ ಎಲ್ಲಾ ಪಡೆಗಳು ವಾಪಸ್ ತೆರಳುವಂತೆ ನೋಡಿಕೊಳ್ಳಬೇಕಿದೆ. ಅಣು ಸ್ಥಾವರದ ಮೇಲಿನ ರಷ್ಯಾದ ಸೇನಾ ನಿಯಂತ್ರಣ ಉಕ್ರೇನ್ ನ ಜನಸಂಖ್ಯೆಗೆ ಮಾರಕವಾದದ್ದು ಎಂದು ಸ್ಟೋಲ್ಟೆನ್‌ಬರ್ಗ್ ಅಭಿಪ್ರಾಯಪಟ್ಟಿದ್ದಾರೆ. ಮಾರ್ಚ್ ನಲ್ಲಿ ರಷ್ಯಾದ ಪಡೆಗಳು ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರವನ್ನು ಆಕ್ರಮಿಸಿಕೊಂಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


