ಧಾರ್ಮಿಕ ಸ್ವಾತಂತ್ರ್ಯ ಕಪ್ಪು ಪಟ್ಟಿಯಿಂದ ಭಾರತವನ್ನು ಹೊರಗಿಟ್ಟ ಅಮೇರಿಕ ವಿರುದ್ಧ ಪಾಕ್ ಅಸಮಾಧಾನ
ಧಾರ್ಮಿಕ ಸ್ವಾತಂತ್ರ್ಯ ಕಪ್ಪು ಪಟ್ಟಿಯಿಂದ ಭಾರತವನ್ನು ಹೊರಗಿಟ್ಟಿರುವ ಅಮೇರಿಕಾದ ನಿರ್ಧಾರವನ್ನು ಪಾಕಿಸ್ತಾನ ಪ್ರಶ್ನಿಸಿದೆ.

ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯ ಕಪ್ಪು ಪಟ್ಟಿಯಿಂದ ಭಾರತವನ್ನು ಹೊರಗಿಟ್ಟಿರುವ ಅಮೇರಿಕಾದ ನಿರ್ಧಾರವನ್ನು ಪಾಕಿಸ್ತಾನ ಪ್ರಶ್ನಿಸಿದೆ.
ಪಾಕಿಸ್ತಾನವನ್ನು ಅಮೇರಿಕ ಧಾರ್ಮಿಕ ಸ್ವಾತಂತ್ರ್ಯ ಕಪ್ಪು ಪಟ್ಟಿಗೆ ಸೇರಿಸಿದ್ದು, ಈ ಪಟ್ಟಿ ಪಾಕಿಸ್ತಾನದ ವಾಸ್ತವಗಳಿಂದ ಬೇರೆಯದ್ದೇ ಆಗಿದೆ ಎಂದು ಹೇಳಿದೆ.
ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಝಾರ ಬಲೂಚ್ ಈ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಕಿಸ್ತಾನ ಬಹು ಧರ್ಮೀಯ ದೇಶವಾಗಿದ್ದು, ಬಹುತ್ವದ ಸಮಾಜವಾಗಿದೆ, ಅನ್ಯ ಮತಗಳೆಡೆಗೆ ಸೌಹಾರ್ದತೆಯ ಶ್ರೀಮಂತ ಪರಂಪರೆ ಹೊಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಧಾರ್ಮಿಕ ಸ್ವಾತಂತ್ರ್ಯವೆಂದರೆ ಇತರರನ್ನು ಮತಾಂತರ ಮಾಡುವ ಹಕ್ಕು ಅಲ್ಲ: ಸುಪ್ರೀಂ ಗೆ ಕೇಂದ್ರ
ಕಳೆದ ವಾರ ಅಮೇರಿಕ ಪಾಕಿಸ್ತಾನ, ಚೀನಾ, ಕ್ಯೂಬಾ, ನಿಕರಾಗುವಾ ಸೇರಿದಂತೆ ಅನೇಕ ರಾಷ್ಟ್ರಗಳನ್ನು ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಆತಂಕಕಾರಿ ಪರಿಸ್ಥಿತಿಯಲ್ಲಿರುವ ದೇಶಗಳ ಪಟ್ಟಿಗೆ ಸೇರಿಸಿತ್ತು. ಅಮೇರಿಕಾದ ಈ ನಿರ್ಧಾರಕ್ಕೆ ಪಾಕಿಸ್ತಾನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಏಕಪಕ್ಷೀಯ ನಿರ್ಧಾರ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


