ಕೆನಡಾ: ಭಾರತೀಯ ಮೂಲದ ಸಿಖ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಅಲ್ಬರ್ಟಾ: ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.
ಹತ್ಯೆಯಾದ ಸಿಖ್ ವ್ಯಕ್ತಿ ಸಂರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ಡಿಸೆಂಬರ್ 3 ರ ರಾತ್ರಿ ಈ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಎಡ್ಮಂಟನ್ ಪೊಲೀಸ್ ಪ್ರಕಟಣೆ ತಿಳಿಸಿದೆ.
ಪೊಲೀಸರ ಪ್ರಕಾರ, ಗುಂಡಿನ ದಾಳಿ ನಡೆಸಿದ ಬಳಿಕ ಶಂಕಿತರ ವಾಹನ ಈ ಪ್ರದೇಶವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಮತ್ತು ಅದರ ಫೋಟೋಗಳನ್ನು ತನಿಖಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ಡಿಸೆಂಬರ್ 3 ರ ರಾತ್ರಿ ನಡೆದ ಯಾವುದೇ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ತಮ್ಮ ಸಿಸಿಟಿವಿ ಕ್ಯಾಮೆರಾಗಳು ಅಥವಾ ಡ್ಯಾಶ್‌ಕ್ಯಾಮ್ ದೃಶ್ಯಗಳನ್ನು ಪರಿಶೀಲಿಸುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ.
ಒಂಟಾರಿಯೊ ಪ್ರಾಂತ್ಯದಲ್ಲಿ ಕಳೆದ ಡಿಸೆಂಬರ್ 3 ರಂದು ನಡೆದ 'ಉದ್ದೇಶಿತ' ದಾಳಿಯಲ್ಲಿ 21 ವರ್ಷದ ಸಿಖ್ ಮಹಿಳೆ ಪವನ್‌ಪ್ರೀತ್ ಕೌರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


