ವಿದೇಶ

ಇರಾನ್‌: ಹಿಜಾಬ್‌, ವಸ್ತ್ರಸಂಹಿತೆ ವಿರೋಧಿ ಹೋರಾಟ; ಆಸ್ಕರ್‌ ನಟಿಯ ಬಂಧನ

ಇರಾನ್ ನಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ವಸ್ತ್ರಸಂಹಿತೆ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ಕಾರಣಕ್ಕೇ ಆಸ್ಕರ್‌ ಪ್ರಶಸ್ತಿ ವಿಜೇತ ಚಿತ್ರದ ನಟಿ ಟೆರಾಹ್ನೆ ಅಲಿದೊಸ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇರಾನ್‌: ಹಿಜಾಬ್‌, ವಸ್ತ್ರಸಂಹಿತೆ ವಿರೋಧಿ ಹೋರಾಟ; ಆಸ್ಕರ್‌ ನಟಿಯ ಬಂಧನ
ನಟಿ ಅಲಿದೂಸ್ತಿ
Published On :

ಟೆಹರಾನ್‌: ಇರಾನ್ ನಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ವಸ್ತ್ರಸಂಹಿತೆ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ಕಾರಣಕ್ಕೇ ಆಸ್ಕರ್‌ ಪ್ರಶಸ್ತಿ ವಿಜೇತ ಚಿತ್ರದ ನಟಿ ಟೆರಾಹ್ನೆ ಅಲಿದೊಸ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ನಟಿ ಅಲಿದೂಸ್ತಿ (38) ಕಳೆದ ಮೂರು ತಿಂಗಳಿಂದ ಹಿಜಾಬ್ ವಿರೋಧಿ ಹೋರಾಟದಲ್ಲಿ ಸಕ್ರಿಯರಾಗಿದ್ದು, ಹಿಜಾಬ್ ಕಡ್ಡಾಯ ಕಾನೂನಿನ ಬದಲಾವಣೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಹಲವು ಪೋಸ್ಟ್‌ಗಳನ್ನು ಹಾಕುತ್ತಿದ್ದರು. ಶನಿವಾರ ಇರಾನ್‌ ಪೋಲಿಸರು ನಟಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದ್ದು, ಆದರೆ ಅವರನ್ನು ಯಾವ ಕಾರಾಗೃಹದಲ್ಲಿ ಇರಿಸಿದ್ದಾರೆ ಎಂಬುದು ತಿಳಿದುಬಂದಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಶೇಖರಿಯ ಮರಣದಂಡನೆಯ ನಂತರ, ಮತ್ತೊಂದು ಪೋಸ್ಟ್‌ನಲ್ಲಿ ತರಣೆಹ್ ಅಲಿದೋಸ್ತಿ, ನಿಮ್ಮ ಮೌನವು ದಬ್ಬಾಳಿಕೆ ಮತ್ತು ನಿರಂಕುಶಾಧಿಕಾರಿಗಳನ್ನು ಬೆಂಬಲಿಸುತ್ತದೆ. ಈ ರಕ್ತಪಾತವನ್ನು ನೋಡುತ್ತಿರುವ ಮತ್ತು ಕ್ರಮ ತೆಗೆದುಕೊಳ್ಳದ ಪ್ರತಿಯೊಂದು ಅಂತರರಾಷ್ಟ್ರೀಯ ಸಂಸ್ಥೆಯು ಮಾನವೀಯತೆಗೆ ಅವಮಾನವಾಗಿದೆ ಎಂದು ಅಲಿದೋಸ್ತಿ  ಹೇಳಿದ್ದರು.

ಅಲಿದೂಸ್ತಿ ನಟಿಸಿದ್ದ ‘ದಿ ಸೆಲ್ಸ್‌ಮ್ಯಾನ್‌‘ ಸಿನಿಮಾ 2016ರಲ್ಲಿ ಆಸ್ಕರ್‌ ಪ್ರಶಸ್ತಿ ಪಡೆದಿತ್ತು. ವಸ್ತ್ರಸಂಹಿತೆ ಹಾಗೂ ಹಿಜಾಬ್‌ ವಿರೋಧಿ ಹೋರಾಟದಲ್ಲಿ ತೊಡಗಿರುವವರಲ್ಲಿ ಇರಾನ್‌ ಸರ್ಕಾರ ಈಗಾಗಲೇ ಕನಿಷ್ಠ 12 ಮಂದಿಯನ್ನು ಮರಣದಂಡನೆಗೆ ಗುರಿಪಡಿಸಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಕನಿಷ್ಠ 488 ಜನರನ್ನು ಹತ್ಯೆ ಮಾಡಿದೆ ಮತ್ತು 18,200 ಜನರನ್ನು ಬಂಧಿಸಿದೆ ಎಂದು ಇರಾನ್ ಮಾನವ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.