ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೆಕ್ಸ್ ಆಡಿಯೋ ಕಾಲ್ ಲೀಕ್: ನಕಲಿ ಎಂದ ಪಾಕಿಸ್ತಾನ್ ತೆಹರೀಕ್ ಇ ಇನ್ಸಾಫ್!
ಇಮ್ರಾನ್ ಖಾನ್ ಮಹಿಳೆ ಜೊತೆ ಸೆಕ್ಸ್ ಕುರಿತು ಮಾತನಾಡಿರುವ ಆಡಿಯೊ ಸೋರಿಕೆಯಾಗಿದೆ. ಆದರೆ ಇದು ನಕಲಿ ಎಂದು ಇಮ್ರಾನ್ ಖಾನ್ ನಾಯಕತ್ವದ ‘ಪಾಕಿಸ್ತಾನ್ ತೆಹರೀಕ್ ಇ ಇನ್ಸಾಫ್‘(ಪಿಟಿಐ) ಪಕ್ಷ ಹೇಳಿದೆ.

ನವದೆಹಲಿ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹುದ್ದೆಯಿಂದ ಕೆಳಗಿಳಿದರೂ ಭಾರಿ ಸದ್ದು ಮಾಡುತ್ತಿದ್ದಾರೆ. ಪ್ರಧಾನಿಯಾಗಿ ವಿವಾದದಲ್ಲೇ ಮುಳುಗಿದ್ದ ಇಮ್ರಾನ್ ಖಾನ್ ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯಲ್ಲಿ ಗುಂಡೇಟು ತಗುಲಿ ವಿಶ್ವದಾದ್ಯಂತ ಸುದ್ದಿಯಾಗಿದ್ದರು. ಇದೀಗ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.
ಇಮ್ರಾನ್ ಖಾನ್ ಮಹಿಳೆ ಜೊತೆ ಸೆಕ್ಸ್ ಕುರಿತು ಮಾತನಾಡಿರುವ ಆಡಿಯೊ ಸೋರಿಕೆಯಾಗಿದೆ. ಆದರೆ ಇದು ನಕಲಿ ಎಂದು ಇಮ್ರಾನ್ ಖಾನ್ ನಾಯಕತ್ವದ ‘ಪಾಕಿಸ್ತಾನ್ ತೆಹರೀಕ್ ಇ ಇನ್ಸಾಫ್‘(ಪಿಟಿಐ) ಪಕ್ಷ ಹೇಳಿದೆ.
ಮಹಿಳೆಯೊಬ್ಬರು ಇಮ್ರಾನ್ ಖಾನ್ ಜತೆಗೆ ಸೆಕ್ಸ್ ಸಂಭಾಷಣೆ ನಡೆಸಿರುವ ಎರಡು ಆಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದು ಇಮ್ರಾನ್ ಖಾನ್ ಅವರ ಅಸಲಿ ಧ್ವನಿ ಎಂದು ಪಾಕಿಸ್ತಾನ್ ಪೀಪಲ್ ಪಾರ್ಟಿ ಹಾಗೂ ಪಾಕಿಸ್ತಾನ್ ಮುಸ್ಲಿಂ ಲೀಗ್ ಪಕ್ಷಗಳು ಆರೋಪ ಮಾಡಿವೆ. ಆದರೆ ಪಿಟಿಐ ಪಕ್ಷ ಈ ಆರೋಪವನ್ನು ತಳ್ಳಿ ಹಾಕಿದೆ.
ಇಮ್ರಾನ್ ಖಾನ್ ಅವರು ಮಹಿಳೆಯೊಬ್ಬರಿಗೆ ತನ್ನ ಬಳಿ ಬರುವಂತೆ ಕರೆಯುತ್ತಾರೆ. ಆ ಮಹಿಳೆ ಈಗ ಬರಲು ಸಾಧ್ಯವಿಲ್ಲ, ಮತ್ತೊಂದು ದಿನ ಬರುತ್ತೇನೆ ಎಂದು ಹೇಳುತ್ತಾರೆ, ಇದಕ್ಕೆ ಪ್ರತಿಕ್ರಿಯಿಸಿರುವ ಇಮ್ರಾನ್ ಖಾನ್, ಆ ದಿನ ನನ್ನ ಎಲ್ಲಾ ಕಾರ್ಯಕ್ರಮಗಳನ್ನು ಬದಲಾಯಿಸುತ್ತೇನೆ ಎಂದು ಹೇಳುತ್ತಾರೆ.
ಈಗಾಗಲೇ ನಿಮ್ಮ ನಡೆಯಿಂದ ನನ್ನ ಖಾಸಗಿ ಅಂಗಗಳಿಗೆ ನೋವಾಗಿದೆ. ಹೀಗಾಗಿ ಈಗ ಬರಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಆಡಿಯೋ ಇದೀಗ ಪಾಕಿಸ್ತಾನ ಮಾತ್ರವಲ್ಲ, ವಿಶ್ವದಲ್ಲೇ ಪಾಕಿಸ್ತಾನದ ಪ್ರಧಾನಿ ಕಚೇರಿಯಲ್ಲಿ ನಡೆಯುತ್ತಿರುವ ಅಸಲಿ ಆಟಗಳನ್ನು ಬೆತ್ತಲೆ ಮಾಡಿದೆ ಎಂದು ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿನ ಆಡಿಯೊಗಳು ಸೋರಿಕೆಯಾಗಿವ ಎಂದು ಹೇಳಲಾಗುತ್ತಿದೆ. ಪ್ರಧಾನಿ ಕಚೇರಿಯಲ್ಲಿ ಇಮ್ರಾನ್ ಖಾನ್ ಏನೆಲ್ಲಾ ಆಟವಾಡಿದ್ದಾರೆ ಎಂದು ಹಲವು ಪಕ್ಷಗಳ ರಾಜಕೀಯ ನಾಯಕರು ಟೀಕೆ ಮಾಡಿದ್ದಾರೆ.
ಇಮ್ರಾನ್ ಖಾನ್ ಅವರದ್ದು ಎನ್ನಲಾಗಿರುವ ಸೆಕ್ಸ್ ಕಾಲ್ ಆಡಿಯೋವನ್ನು ಪಾಕಿಸ್ತಾನದ ಪತ್ರಕರ್ತ ಸೈಯದ್ ಆಲಿ ಹೈದರ್ ಲೀಕ್ ಮಾಡಿದ್ದಾರೆ. ಯೂಟ್ಯೂಬ್ ಚಾನೆಲ್ ಮೂಲಕ ಈ ಆಡಿಯೋ ಬಹಿರಂಗ ಮಾಡಲಾಗಿದೆ. ಈ ಆಡಿಯೋದಲ್ಲಿ ಇಮ್ರಾನ್ ಖಾನ್, ಮಹಿಳೆಯೊಂದಿಗೆ ಸೆಕ್ಸ್ ಸಂಭಾಷಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


