ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಮೇಲೆ ಶುಕ್ರವಾರ ಭೀಕರ ಗುಂಡಿನ ದಾಳಿಯಾಗಿದೆ. ಜಪಾನ್ ನ ನಾರಾ ಸಿಟಿಯಲ್ಲಿ ಜಪಾನ್ ನ ಕಾಲಮಾನ ಬೆಳಗ್ಗೆ 11.30ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.

ಟೋಕಿಯೊ: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಮೇಲೆ ಶುಕ್ರವಾರ ಭೀಕರ ಗುಂಡಿನ ದಾಳಿಯಾಗಿದೆ. ಜಪಾನ್ ನ ನಾರಾ ಸಿಟಿಯಲ್ಲಿ ಜಪಾನ್ ನ ಕಾಲಮಾನ ಬೆಳಗ್ಗೆ 11.30ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಜಪಾನ್ ನ ಸಾರ್ವಜನಿಕ ದೂರದರ್ಶನ ವರದಿ ಮಾಡಿದೆ.
ತೀವ್ರ ರಕ್ತಸ್ರಾವವಾಗಿ ಕುಸಿದ ಸ್ಥಳದಲ್ಲಿಯೇ ಕುಸಿದುಬಿದ್ದ ಶಿಂಜೊ ಅಬೆಯವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದೇ ಭಾನುವಾರ ಅಂದರೆ ಜುಲೈ 10ರಂದು ಜಪಾನ್ ಸಂಸತ್ತಿನ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು ಅದರ ಸಂಬಂಧ ಶಿಂಜೊ ಅಬೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


