ಉಕ್ರೇನ್ ಅಪಾರ್ಟ್ ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಸಾವು
ಪೂರ್ವ ಉಕ್ರೇನ್ ನಗರವಾದ ಚಾಸಿನ್ ಯಾರ್ ನಲ್ಲಿರುವ ಅಪಾರ್ಟ್ ಮೆಂಟ್ ಬ್ಲಾಕ್ ನ ಮೇಲೆ ರಷ್ಯಾದ ಸೇನೆ ರಾಕೆಟ್ ಹಾರಿಸಿದೆ. ಇದರಿಂದಾಗಿ ಕನಿಷ್ಠ 15 ಜನರು ದುರ್ಮರಣಕ್ಕೀಡಾಗಿದ್ದಾರೆ.

ಕೈವ್: ಪೂರ್ವ ಉಕ್ರೇನ್ ನಗರವಾದ ಚಾಸಿನ್ ಯಾರ್ ನಲ್ಲಿರುವ ಅಪಾರ್ಟ್ ಮೆಂಟ್ ಬ್ಲಾಕ್ ನ ಮೇಲೆ ರಷ್ಯಾದ ಸೇನೆ ರಾಕೆಟ್ ಹಾರಿಸಿದೆ. ಇದರಿಂದಾಗಿ ಕನಿಷ್ಠ 15 ಜನರು ದುರ್ಮರಣಕ್ಕೀಡಾಗಿದ್ದಾರೆ.
ದಾಳಿಯ ನಂತರ 20ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದರು ಎಂದು ಬಿಬಿಸಿ ವರದಿ ಮಾಡಿದೆ. ಕೇವಲ ಐವರನ್ನು ಮಾತ್ರ ಅವಶೇಷಗಳಿಂದ ಸುರಕ್ಷಿತವಾಗಿ ಹೊರತೆಗೆಯಲು ಸಾಧ್ಯವಾಗಿದೆ ಎಂದು ಉಕ್ರೇನಿಯನ್ ತುರ್ತು ಸೇವೆಗಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಐದು ಅಂತಸ್ತಿನ ಕಟ್ಟಡದ ಒಂದು ಭಾಗಕ್ಕೆ ರಾಕೆಟ್ ಅಪ್ಪಳಿಸಿದ್ದು, ಚಾಸಿವ್ ಯಾರ್ ಕ್ರಾಮಟೋಸ್ಕ್ ನಗರದ ಸಮೀಪವಿರುವ ಡೊನೆಟ್ಸ್ಕ್ ಪ್ರದೇಶದಲ್ಲಿದೆ. ಪ್ರಾದೇಶಿಕ ಗವರ್ನರ್ ಪಾವ್ಲೋ ಕಿರಿಲೆಂಕೊ ರಷ್ಯಾದ ಉರಾಗಾನ್ ರಾಕೆಟ್ ಗಳಿಂದ ಈ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


