ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸ ಕುಟುಂಬ ಸಮೇತ ಮಾಲ್ಡೀವ್ಸ್ ಗೆ ಪರಾರಿ!
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡೀವ್ಸ್ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಲಂಬೊ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡೀವ್ಸ್ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಎಎಫ್ಪಿ (ಎಪಿ) ಸುದ್ದಿಸಂಸ್ಥೆ ವರದಿ ಮಾಡಿದ್ದು, ಶ್ರೀಲಂಕಾ ಅಧ್ಯಕ್ಷ ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಶ್ರೀಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎಂದು ವರದಿ ಮಾಡಿವೆ.
ರಾಜಪಕ್ಸ ದೇಶವನ್ನು ತೊರೆದಿರುವುದನ್ನು ಸರ್ಕಾರಿ ಮೂಲಗಳು ಕೂಡ ಖಚಿತಪಡಿಸಿದ್ದು, ಈ ಬಗ್ಗೆ ಅವು ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ.
ಇತ್ತ ಶ್ರೀಲಂಕಾ ಅಧ್ಯಕ್ಷ ಹುದ್ದೆಗೆ ರಾಜಪಕ್ಸ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಗಳಿಗೆ ಮುತ್ತಿಗೆ ಹಾಕಿದ್ದಾರೆ. ಇದೀಗ ಜನರ ಆಕ್ರೋಶಕ್ಕೆ ಕೊನೆಗೂ ಮಣಿದಿರುವ ರಾಜಪಕ್ಸ, ಜುಲೈ 13ರಂದು ರಾಜೀನಾಮೆ ನೀಡಲಿದ್ದಾರೆ ಎಂದು ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ ತಿಳಿಸಿದ್ದರು. ಆದರೆ ಅದಕ್ಕೂ ಮೊದಲೇ ರಾಜಪಕ್ಸ ದೇಶ ತೊರೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶ್ರೀಲಂಕಾದ ಸಂಸತ್, ಜುಲೈ 20ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ. ಈಗಾಗಲೇ ಈ ಕುರಿತ ಸಿದ್ಧತೆಗಳು ಆರಂಭವಾಗಿದೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


