ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ
ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 20 ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 20 ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.
ರಾನಿಲ್ ವಿಕ್ರಮಸಿಂಘೆ ಅವರು ಎದುರಾಳಿಗಳ ಎದುರು ಸುಮಾರು 134 ಮತಗಳನ್ನು ಗಳಿಸಿ ಜಯಗಳಿಸಿದ್ದರು. ರಾನಿಲ್ ವಿಕ್ರಮಸಿಂಘೆ ಅವರ ವಿರುದ್ಧ ಭಾರೀ ಪ್ರತಿಭಟನೆಗಳ ನಡುವೆಯೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.
ಬುಧವಾರ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಅವರು ಸ್ಪೀಕರ್ ಅವರನ್ನು ಉದ್ದೇಶಿಸಿ ಸಂಸತ್ತಿನ ಸಂಕೀರ್ಣದ ಒಳಗೆ ಸಂಸತ್ತಿನ ಸಭಾಂಗಣದ ಹೊರಗೆ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್‌ಗೆ ಅನುಮತಿ ಕೋರಿದರು. ಶ್ರೀಲಂಕಾವನ್ನು ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಅವರು ಪ್ರತಿಪಕ್ಷಗಳಿಗೆ ಭರವಸೆ ನೀಡಿದರು.
ಈ ಹಿಂದೆ, ರಾನಿಲ್ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು ಮತ್ತು ಅವರು ಪ್ರಧಾನಿಯಾಗಿದ್ದಾಗ ಅವರ ಅಧಿಕೃತ ನಿವಾಸವನ್ನು ಪ್ರತಿಭಟನಾಕಾರರು ಮುತ್ತಿಗೆ ಹಾಕಿದರು, ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


