ವಿದೇಶ

ಕಾಬೂಲ್ ಗುರುದ್ವಾರದಲ್ಲಿ ಸ್ಫೋಟ: ಪರಿಸ್ಥಿತಿ ಸೂಕ್ಷ್ಮದಿಂದ ಗಮನಿಸಲಾಗುತ್ತಿದೆ- ಭಾರತ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಗುರುದ್ವಾರದಲ್ಲಿ ಶನಿವಾರ ಬೆಳಗ್ಗೆ ಸ್ಫೋಟಗಳು ಸಂಭವಿಸಿದ್ದು, ದಾಳಿ ಸಂಬಂಧ ಭಾರತ ಕಳವಳ ವ್ಯಕ್ತಪಡಿಸಿದೆ ಮತ್ತು ಪರಿಸ್ಥಿತಿಯನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದೆ.

ಕಾಬೂಲ್ ಗುರುದ್ವಾರದಲ್ಲಿ ಸ್ಫೋಟ: ಪರಿಸ್ಥಿತಿ ಸೂಕ್ಷ್ಮದಿಂದ ಗಮನಿಸಲಾಗುತ್ತಿದೆ- ಭಾರತ
ಗುರುದ್ವಾರದಲ್ಲಿ ಸ್ಫೋಟಗೊಂಡಿರುವುದು.
Published On :

ನವದೆಹಲಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಗುರುದ್ವಾರದಲ್ಲಿ ಶನಿವಾರ ಬೆಳಗ್ಗೆ ಸ್ಫೋಟಗಳು ಸಂಭವಿಸಿದ್ದು, ದಾಳಿ ಸಂಬಂಧ ಭಾರತ ಕಳವಳ ವ್ಯಕ್ತಪಡಿಸಿದೆ ಮತ್ತು ಪರಿಸ್ಥಿತಿಯನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದೆ.

ಮತ್ತು ಗುಂಡಿನ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿಕೆ ನೀಡಿದ್ದು, ಕಾಬೂಲ್‌ನಲ್ಲಿರುವ ಪವಿತ್ರ ಗುರುದ್ವಾರದ ಮೇಲಿನ ದಾಳಿಗೆ ತೀವ್ರ ಕಳವಳಗೊಂಡಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಬೆಳವಣಿಗೆಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಂದು ಬೆಳಿಗ್ಗೆ ಕಾಬೂಲ್‌ನ ಕಾರ್ಟೆ ಪರ್ವಾನ್ ಪ್ರದೇಶದ ಗುರುದ್ವಾರದ ಬಳಿ ಕನಿಷ್ಠ ಎರಡು ಸ್ಫೋಟಗಳು ವರದಿಯಾಗಿವೆ ಎಂದು ತಿಳಿಸಿದೆ. ಮೂಲಗಳ ಪ್ರಕಾರ, ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ಹೇಳಲಾಗುತ್ತಿದ್ದು, ದಾಳಿಯ ಹೊಣೆಯನ್ನು ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.