ಜಿ20: ರಷ್ಯಾ ವಿದೇಶಾಂಗ ಸಚಿವರಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು, ಹೃದಯ ಸಂಬಂಧಿ ಸಮಸ್ಯೆ ಶಂಕೆ
ಜಿ20 ಶೃಂಗಸಭೆಗಾಗಿ ಬಾಲಿಗೆ ಆಗಮಿಸಿದ್ದ ರಷ್ಯಾ ವಿದೇಶಾಂಗ ಸಚಿವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಲಿ: ಜಿ20 ಶೃಂಗಸಭೆಗಾಗಿ ಬಾಲಿಗೆ ಆಗಮಿಸಿದ್ದ ರಷ್ಯಾ ವಿದೇಶಾಂಗ ಸಚಿವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವ ಸೆರ್ಗೆ ಲಾವ್ರೊವ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ಜಿ20 ಶೃಂಗಸಭೆ: ಸುನಕ್, ಬೈಡನ್ ಜೊತೆ ಮೋದಿ ದ್ವಿಪಕ್ಷೀಯ ಸಭೆ!
ಈ ಮಾಹಿತಿಯನ್ನು ಇಂಡೋನೇಷ್ಯಾದ ಅಧಿಕಾರಿಗಳು ದೃಢಪಡಿಸಿದ್ದು, ರಷ್ಯಾದ ಸಚಿವರಿಗೆ ದ್ವೀಪ ರಾಷ್ಟ್ರದ ರೆಸಾರ್ಟ್ ನಲ್ಲಿ ಇಂಡೋನೇಶ್ಯಾ ಸರ್ಕಾರದ ಮೂವರು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆಸಿಯಾನ್ ಶೃಂಗಸಭೆ: ಜೈಶಂಕರ್ - ಬ್ಲಿಂಕನ್ ಭೇಟಿ; ಉಕ್ರೇನ್ ಯುದ್ಧ, ಭಾರತ-ಅಮೆರಿಕ ಸಂಬಂಧಗಳ ಬಗ್ಗೆ ಚರ್ಚೆ
ಘಟನೆಗೆ ಸಂಬಂಧಿಸಿದಂತೆ ಯಾರೊಬ್ಬರೂ ತಮ್ಮ ಗುರುತು ಬಹಿರಂಗಪಡಿಸಲು ಅಥವಾ ಸಾರ್ವಜನಿಕವಾಗಿ ಈ ವಿಷಯವನ್ನು ಚರ್ಚಿಸಲು ನಿರಾಕರಿಸಿದ್ದಾರೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಲಾವ್ರೊವ್ ಅವರಿಗೆ ಹೃದಯ ಸಂಬಂಧಿತ ಚಿಕಿತ್ಸೆ ಕೊಡಿಸಲಾಗುತ್ತಿದೆ, ಅಲ್ಲಿನ ರಷ್ಯಾ ರಾಯಭಾರ ಕಚೇರಿ ಅಧಿಕಾರಿಗಳು ತಕ್ಷಣದ ಪ್ರತಿಕ್ರಿಯೆಗೆ ಲಭ್ಯವಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


