ವಿದೇಶ

ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ: ವಿಡಿಯೋ ವೈರಲ್ 

ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಲಾಗಿದೆ. ಪ್ರತಿಭಟನಾಕಾರರೊಬ್ಬರು ಭಾನುವಾರ ಮ್ಯಾಕ್ರನ್‌ ಅವರ ಕೆನ್ನೆಗೆ ಬಾರಿಸಿದ್ದು, ಸೋಮವಾರ ಟ್ವಿಟರ್ ನಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ: ವಿಡಿಯೋ ವೈರಲ್ 
ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌
Published On :

ಪ್ಯಾರಿಸ್: ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಮತ್ತೊಮ್ಮೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಲಾಗಿದೆ. ಪ್ರತಿಭಟನಾಕಾರರೊಬ್ಬರು ಭಾನುವಾರ ಮ್ಯಾಕ್ರನ್‌ ಅವರ ಕೆನ್ನೆಗೆ ಬಾರಿಸಿದ್ದು, ಸೋಮವಾರ ಟ್ವಿಟರ್ ನಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಬಿಳಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ ಮಹಿಳೆ, ಅಧ್ಯಕ್ಷರ ಭದ್ರತಾ ಸಿಬ್ಬಂದಿಯ ಕಣ್ತುಪಿಸಿ,  ಮ್ಯಾಕ್ರನ್‌ ಗೆ ಕಪಾಳಮೋಕ್ಷ ಮಾಡಿದ್ದಾರೆ. ನಂತರ ಭದ್ರತಾ ಸಿಬ್ಬಂದಿ ಆಕ್ರಮಣಕಾರರಿಂದ ಹೆಚ್ಚಿನ ಆಕ್ರಮಣವಾಗದಂತೆ ಫ್ರಾನ್ಸ್ ಅಧ್ಯಕ್ಷರನ್ನು ರಕ್ಷಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಮ್ಯಾಕ್ರನ್ ಗೆ ಸಾರ್ವಜನಿಕವಾಗಿ ಕಪಾಳಮೋಕ್ಷವಾಗಿದೆ. ಕಳೆದ ವರ್ಷ ಕೂಡಾ ಸಾರ್ವಜನಿಕವಾಗಿ ಮ್ಯಾಕ್ರನ್ ಗೆ ಕಪಾಳ ಮೋಕ್ಷ ಮಾಡಿದ ಇಬ್ಬರನ್ನು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.