ಚೀನಾದ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ: 36 ಮಂದಿ ಸಾವು, ಇಬ್ಬರು ನಾಪತ್ತೆ
ಮಧ್ಯ ಚೀನಾದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 36 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೀಜಿಂಗ್: ಮಧ್ಯ ಚೀನಾದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 36 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ನಗರದ ಪ್ರಚಾರ ವಿಭಾಗದ ಪ್ರಕಾರ, ಹೆನಾನ್ ಪ್ರಾಂತ್ಯದ ಅನ್ಯಾಂಗ್ ನಗರದ ವೆನ್‌ಫೆಂಗ್ ಜಿಲ್ಲೆಯ ವಾಣಿಜ್ಯ ಮತ್ತು ವ್ಯಾಪಾರ ಕಂಪನಿಯ ಘಟಕವೊಂದರಲ್ಲಿ ಸೋಮವಾರ ಸಂಭವಿಸಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಗಂಟೆಗಳಿಗೂ ಹೆಚ್ಚು ಸಮಯ ಕೆಲಸ ಮಾಡಿದರು.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಸರ್ಕಾರಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆಗಾಗಿ ಪೊಲೀಸರು ಕೆಲವು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
2015ರ ಆಗಸ್ಟ್‌ನಲ್ಲಿ, ಸುಮಾರು 700 ಟನ್ ಸೋಡಿಯಂ ಸೈನೈಡ್ ಸೇರಿದಂತೆ ದೊಡ್ಡ ಪ್ರಮಾಣದ ವಿಷಕಾರಿ ರಾಸಾಯನಿಕಗಳನ್ನು ಸಂಗ್ರಹಿಸಲಾಗಿದ್ದ ಟಿಯಾಂಜಿನ್ ಬಂದರಿನ ಗೋದಾಮಿನಲ್ಲಿ ನಡೆದ ಸ್ಫೋಟಗಳಿಂದ 170ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು ಮತ್ತು 700 ಜನರು ಗಾಯಗೊಂಡಿದ್ದರು.
ಚೀನಾ ಆಗಾಗ್ಗೆ ಮಾರಣಾಂತಿಕ ಬೆಂಕಿ ಅವಘಡ ಮತ್ತು ಕೈಗಾರಿಕಾ ಅಪಘಾತಗಳಿಗೆ ಗುರಿಯಾಗುತ್ತದೆ. ನಿರ್ಲಕ್ಷ್ಯದಿಂದಲೇ ಇಂತಹ ಅವಘಡಗಳು ಸಂಭವಿಸುತ್ತವೆ ಎಂದು ಆರೋಪಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


