ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ
ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಇನ್ನು ಸಿಜೆಸಿಎಸ್ ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಸಾಹಿರ್ ಶಂಶಾದ್ ಮುರ್ಜಾ ನೇಮಕಗೊಂಡಿದ್ದಾರೆ.

ನವದೆಹಲಿ: ಲೆಫ್ಟಿನೆಂಟ್ ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಇನ್ನು ಸಿಜೆಸಿಎಸ್ ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಸಾಹಿರ್ ಶಂಶಾದ್ ಮುರ್ಜಾ ನೇಮಕಗೊಂಡಿದ್ದಾರೆ.
ಈ ಹಿಂದೆ ಸೇನಾ ಗುಪ್ತಚರ ಮುಖ್ಯಸ್ಥರಾಗಿದ್ದ ಜನರಲ್ ಅಸಿಮ್, ಇತ್ತೀಚೆಗಷ್ಟೇ ಲೆಫ್ಟಿನೆಂಟ್ ಜನರಲ್ ಶ್ರೇಣಿಗೆ ಮುಂಬಡ್ತಿ ಪಡೆದಿದ್ದರು.
ನಿರ್ಗಮಿತ ಸಿಒಎಎಸ್ ಕಾಮರ್ ಜಾವೇದ್ ಬಾಜ್ವ 2019 ರಲ್ಲೇ ನಿವೃತ್ತಿ ಹೊಂದಬೇಕಿತ್ತು. ಆದರೆ ಇಮ್ರಾನ್ ಖಾನ್ ಆಡಳಿತಾವಧಿಯಲ್ಲಿ ಬಾಜ್ವಾ ಅವರ ಅವಧಿಯನ್ನು 3 ವರ್ಷಗಳಿಗೆ ವಿಸ್ತರಣೆ ಮಾಡಲಾಗಿತ್ತು. ಬಾಜ್ವಾ ತಮ್ಮ ಸೇವಾವಧಿಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ ಅವರು ಇತ್ತೀಚೆಗೆ ನಿವೃತ್ತಿಯ ಸುಳಿವು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


