ರಾಸಾಯನ ವಿಜ್ಞಾನ ವಿಭಾಗದಲ್ಲಿ ಮೂವರಿಗೆ ನೊಬೆಲ್ ಪ್ರಶಸ್ತಿ
ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ರಾಸಾಯನ ವಿಜ್ಞಾನ ವಿಭಾಗದಲ್ಲಿ ಮೂವರಿಗೆ ನೊಬೆಲ್ ಪ್ರಶಸ್ತಿ ನೀಡಿದೆ.

ನವದೆಹಲಿ: ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ರಾಸಾಯನ ವಿಜ್ಞಾನ ವಿಭಾಗದಲ್ಲಿ ಮೂವರಿಗೆ ನೊಬೆಲ್ ಪ್ರಶಸ್ತಿ ನೀಡಿದೆ.
ಕ್ಯಾರೊಲಿನ್ ಆರ್ ಬರ್ಟೊಝಿ, ಮಾರ್ಟೆನ್ ಮೆಲ್ಡಾಲ್ ಮತ್ತು ಕೆ ಬ್ಯಾರಿ ಶಾರ್ಪ್ಲೆಸ್ ರಾಸಾಯನ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿಗಳಾಗಿದ್ದು, ಕ್ಲಿಕ್ ಕೆಮಿಸ್ಟ್ರಿ ಹಾಗೂ ಬಯೋಆರ್ಥೋಗನಲ್ ಕೆಮಿಸ್ಟ್ರಿಯ ಅಭಿವೃದ್ಧಿಗಾಗಿ ಈ ಗೌರವಕ್ಕೆ ಭಾಜನರಾಗಿದ್ದಾರೆ.
ಎರಡು ನೊಬೆಲ್ ಪ್ರಶಸ್ತಿಗಳನ್ನು ಪಡೆದ 5 ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಬ್ಯಾರಿ ಶಾರ್ಪ್ಲೆಸ್ ಭಾಜನರಾಗಿದ್ದಾರೆ. ಜಾನ್ ಬಾರ್ಡೀನ್, ಮೇರಿ ಸ್ಕ್ಲೋಡೋವ್ಸ್ಕಾ ಕ್ಯೂರಿ, ಲಿನಸ್ ಪಾಲಿಂಗ್ ಮತ್ತು ಫ್ರೆಡೆರಿಕ್ ಸ್ಯಾಂಗರ್ ಈ ಹಿಂದೆ ಎರಡು ಬಾರಿ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು. ಶಾರ್ಪೆಲ್ಸ್ ಅವರಿಗೆ 2001 ರಲ್ಲಿ ಮತ್ತು 2022 ರಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


