ವೆನೆಜುವೆಲಾದಲ್ಲಿ ಮಳೆಗೆ ಭೂಕುಸಿತ: 22 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಕಣ್ಮರೆ
ಮಧ್ಯ ವೆನೆಜುವೆಲಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ. ನದಿಯೊಂದು ಉಕ್ಕಿ ಹರಿದ ನಂತರ 50 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.

ಲಾಸ್ ತೆಜೇರಿಯಾಸ್(ವೆನೆಜುವೆಲಾ): ಮಧ್ಯ ವೆನೆಜುವೆಲಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ. ನದಿಯೊಂದು ಉಕ್ಕಿ ಹರಿದ ನಂತರ 50 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.
ಹೆಚ್ಚಿನ ಮಳೆಯ ಪರಿಣಾಮವಾಗಿ ಬಿಕ್ಕಟ್ಟು-ಪೀಡಿತ ದಕ್ಷಿಣ ಅಮೆರಿಕಾ ರಾಷ್ಟ್ರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಹತ್ತಾರು ಜನರು ಮೃತಪಟ್ಟಿದ್ದರು. ಇಲ್ಲಿ ಸಾಕಷ್ಟು ಸಾವು-ನೋವು ಉಂಟಾಗಿದೆ. 22 ಜನರು ಮೃತಪಟ್ಟಿದ್ದಾರೆ. 52 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಉಪಾಧ್ಯಕ್ಷ ಡೆಲ್ಸಿ ರೊಡ್ರಿಗಸ್ ಲಾಸ್ ಟೆಜೆರಿಯಾಸ್ ಪಟ್ಟಣದ ಸ್ಥಿತಿಗತಿ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮನೆಗಳು, ಹತ್ತಾರು ವ್ಯಾಪಾರಿ ಅಂಗಡಿಗಳು, ಮಳಿಗೆಗಳು ನಾಶವಾಗಿವೆ. ಪಟ್ಟಣದ ಬೀದಿಬೀದಿಗಳಲ್ಲಿ ಕಸಕಡ್ಡಿಗಳು, ಕಟ್ಟಿಗೆಗಳು ಬಿದ್ದಿವೆ. ಕೆಸರು ತುಂಬಿಕೊಂಡಿವೆ. ಒಡೆದ ಮರ, ಗೃಹೋಪಯೋಗಿ ವಸ್ತುಗಳು ಮತ್ತು ಮ್ಯಾಂಗಲ್ಡ್ ಕಾರುಗಳು ಸೇರಿದಂತೆ ಹಲವು ವಸ್ತುಗಳು ರಸ್ತೆಯಲ್ಲಿ, ರಸ್ತೆಬದಿಗಳಲ್ಲಿ ಬಿದ್ದಿರುವ ದೃಶ್ಯ ಸಾಮಾನ್ಯವಾಗಿದೆ.
ಲಾಸ್ ಟೆಜೆರಿಯಾಸ್ ಗ್ರಾಮದಲ್ಲಿ ಸಾಕಷ್ಟು ಹಾನಿಯುಂಟಾಗಿದೆ. ರಾಜ್ಯದ ರಾಜಧಾನಿ ಕ್ಯಾರಕಾಸ್‌ನಿಂದ 50 ಕಿಲೋಮೀಟರ್ (30 ಮೈಲುಗಳು) ದೂರದಲ್ಲಿರುವ ಪಟ್ಟಣ ಕಣ್ಮರೆಯಾದಂತಾಗಿದೆ. ಸುಮಾರು ಒಂದು ಸಾವಿರ ಜನರು ರಕ್ಷಣಾ ಪ್ರಯತ್ನಗಳಲ್ಲಿ ಸೇರಿಕೊಂಡಿದ್ದಾರೆ ಎಂದು ಆಂತರಿಕ ಮತ್ತು ನ್ಯಾಯ ಸಚಿವ ರೆಮಿಜಿಯೊ ಸೆಬಾಲ್ಲೋಸ್ ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


