ವಿದೇಶ

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರೆ, 15 ಮಂದಿಗೆ ತೀವ್ರ ಗಾಯಗಳಾಗಿವೆ.

ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ; 11 ಸಾವು, 15 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಮಾಸ್ಕೋ: ರಷ್ಯಾ ಸೇನಾ ತರಬೇತಿ ಶಿಬಿರದ ಮೇಲೆ ಉಗ್ರರ ದಾಳಿ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರೆ, 15 ಮಂದಿಗೆ ತೀವ್ರ ಗಾಯಗಳಾಗಿವೆ.

ರಾಯ್ಟರ್ಸ್ ಈ ಬಗ್ಗೆ ರಕ್ಷಣಾ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಪ್ರಕಟಿಸಿದೆ. ಇಬ್ಬರು ವ್ಯಕ್ತಿಗಳು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪಶ್ಚಿಮ ರಷ್ಯಾದಲ್ಲಿ ಈ ಘಟನೆ ವರದಿಯಾಗಿದೆ.

ಉಕ್ರೇನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಉದ್ದೇಶದಿಂದ ವ್ಯಕ್ತಿಗಳು ಬಂದೂಕು ತರಬೇತಿ ಅಧಿವೇಶನ ಸೆಷನ್ ನಡೆಯುತ್ತಿದ್ದಾಗ ಈ ಘಟನೆ ವರದಿಯಾಗಿದ್ದು ಸಿಬ್ಬಂದಿಗಳತ್ತ ಉಗ್ರರು ಗುಂಡು ಹಾರಿಸಿದ್ದಾರೆ.

ಇಬ್ಬರು ಶೂಟರ್ ಗಳು ಈ ಹಿಂದಿನ ಸೋವಿಯತ್ ರಿಪಬ್ಲಿಕ್ ನ ರಾಷ್ಟ್ರವಾದಿಗಳಾಗಿದ್ದು, ದಾಳಿಯ ಬಳಿಕ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೋಲುಗಳನ್ನು ಎದುರಿಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಹಿನ್ನೆಡೆ ಎಂದು ಈ ಘಟನೆಯನ್ನು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.