ಸಾರ್ವಜನಿಕವಾಗಿ ಕಾಣಿಸಿಕೊಂಡ ಕ್ಸಿ ಜಿನ್‌ಪಿಂಗ್: ಊಹಾಪೋಹಗಳಿಗೆ ತೆರೆ
ಮುಂದಿನ ತಿಂಗಳು ನಡೆಯಲಿರುವ ಚೀನಾದ ಆಡಳಿತ ಪಕ್ಷದ ನಿರ್ಣಾಯಕ ಅಧಿವೇಶನಕ್ಕೆ ಮುಂಚಿತವಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಾರ್ವಜನಿಕವಾಗಿ ಕಾಣಿಸುವುದಿಲ್ಲ ಎಂಬ ಊಹಾಪೋಹಗಳ ಮಧ್ಯೆ ಅವರು ಮಂಗಳವಾರ ಕಮ್ಯುನಿಸ್ಟ್ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಬೀಜಿಂಗ್: ಮುಂದಿನ ತಿಂಗಳು ನಡೆಯಲಿರುವ ಚೀನಾದ ಆಡಳಿತ ಪಕ್ಷದ ನಿರ್ಣಾಯಕ ಅಧಿವೇಶನಕ್ಕೆ ಮುಂಚಿತವಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಾರ್ವಜನಿಕವಾಗಿ ಕಾಣಿಸುವುದಿಲ್ಲ ಎಂಬ ಊಹಾಪೋಹಗಳ ಮಧ್ಯೆ ಅವರು ಮಂಗಳವಾರ ಕಮ್ಯುನಿಸ್ಟ್ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.
ಇದು ಸೆಪ್ಟೆಂಬರ್ 16ರಂದು ಉಜ್ಬೇಕಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಿಂದ ಹಿಂದಿರುಗಿದ ನಂತರ ಜಿನ್‌ಪಿಂಗ್ ಅವರ ಮೊದಲ ಸಾರ್ವಜನಿಕ ಪ್ರದರ್ಶನವಾಗಿದೆ.
ಚೀನಾದ ಅಧಿಕೃತ ಸುದ್ದಿ ಸಂಸ್ಥೆ 'ಕ್ಸಿನ್ಹುವಾ'ದ ಸುದ್ದಿ ಪ್ರಕಾರ, ಕಮ್ಯುನಿಸ್ಟ್ ಪಕ್ಷದ ಕಳೆದೊಂದು ದಶಕದ ಆಡಳಿತ ಸಾಧನೆ ಬಿಂಬಿಸುವ ವಸ್ತುಪ್ರದರ್ಶನದಲ್ಲಿ ಜಿನ್ ಪಿಂಗ್ ಭಾಗವಹಿಸಿದ್ದರು. ಅಧ್ಯಕ್ಷರು ಈ ಸಂದರ್ಭದಲ್ಲಿ ತಮ್ಮ ಭಾಷಣದಲ್ಲಿ, ಚೀನಾದ ಗುಣಲಕ್ಷಣಗಳೊಂದಿಗೆ ಸಮಾಜವಾದದ ಹೊಸ ವಿಜಯದ ಕಡೆಗೆ ಸಂಕಲ್ಪದೊಂದಿಗೆ ಮುನ್ನಡೆಯಲು ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಜಿನ್ ಪಿಂಗ್ ಅವರು ಕಳೆದ ಏಳು ದಿನಗಳಿಂದ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ. ವಿದೇಶದಿಂದ ಹಿಂದಿರುಗಿದ ನಂತರ ದೇಶದ ಕೋವಿಡ್-ನೀತಿಯ ಭಾಗವಾಗಿ ಜಿನ್‌ಪಿಂಗ್ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


