ಅಫ್ಘಾನಿಸ್ತಾನ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್
ಅಫ್ಘಾನಿಸ್ತಾನದ ಹುಡುಗಿಯರಿಗೆ ವಿಶ್ವವಿದ್ಯಾಲಯ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

ಕಾಬೂಲ್: ಅಫ್ಘಾನಿಸ್ತಾನದ ಹುಡುಗಿಯರಿಗೆ ವಿಶ್ವವಿದ್ಯಾಲಯ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.
"ಉನ್ನತ ಶಿಕ್ಷಣ ಸಚಿವಾಲಯದ ಆದೇಶದಲ್ಲಿ ಮುಂದಿನ ಆದೇಶದವರೆಗೆ ಅಫ್ಘಾನಿಸ್ತಾನದಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ" ಎಂದು ಅಫ್ಘಾನಿಸ್ತಾನದ ಏಜೆನ್ಸಿ TOLO ಸುದ್ದಿ ಟ್ವೀಟ್‌ನಲ್ಲಿ ತಿಳಿಸಿದೆ.
ಹ್ಯೂಮನ್ ರೈಟ್ಸ್ ವಾಚ್ ಪ್ರಕಾರ, ತಾಲಿಬಾನ್ ಆಗಸ್ಟ್ 2021 ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ಮೂಲಭೂತ ಹಕ್ಕುಗಳನ್ನು ವಿಶೇಷವಾಗಿ ಮಹಿಳೆಯರು ಮತ್ತು ಹುಡುಗಿಯರ ಹಕ್ಕುಗಳನ್ನು ತೀವ್ರವಾಗಿ ನಿರ್ಬಂಧಿಸುವ ನೀತಿಗಳನ್ನು ಜಾರಿಗೆ ತಂದಿತು.
ನಾಗರಿಕ ಸೇವೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರನ್ನು ತಾಲಿಬಾನ್ ವಜಾಗೊಳಿಸಿತು ಮತ್ತು ಹೆಚ್ಚಿನ ಪ್ರಾಂತ್ಯಗಳಲ್ಲಿ ಹುಡುಗಿಯರು ಮಾಧ್ಯಮಿಕ ಶಾಲೆಗೆ ಹೋಗುವುದನ್ನು ನಿಷೇಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


