ಎಷ್ಟಾದರು ದೂರಿ, ಆದರೆ ಟ್ವಿಟರ್ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಿ: ವಿರೋಧ ಹಿನ್ನೆಲೆ ಎಲಾನ್ ಮಸ್ಕ್ ಪ್ರತಿಕ್ರಿಯೆ
ನೀವೆಷ್ಟೇ ದೂರಿದರೂ ಟ್ವಿಟರ್ ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಲೇಬೇಕೆಂದು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.

ವಾಷಿಂಗ್ಟನ್: ನೀವೆಷ್ಟೇ ದೂರಿದರೂ ಟ್ವಿಟರ್ ನಲ್ಲಿ ಬ್ಲೂ ಟಿಕ್ ಪಡೆಯಲು ತಿಂಗಳಿಗೆ 8 ಡಾಲರ್ ಶುಲ್ಕ ಪಾವತಿಸಲೇಬೇಕೆಂದು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ.
ಟ್ವಿಟರ್ನಲ್ಲಿ ಬ್ಲೂಟಿಕ್ ಅಥವಾ ಪರಿಶೀಲಿಸಿದ ಟ್ವಿಟರ್ ಖಾತೆ ಪಡೆಯಲು 19.99 ಯಎಸ್ ಡಾಲರ್ ಕೊಡಬೇಕೆಂಬ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಎಲಾನ್ ಮಸ್ಕ್, ಪ್ರತಿ ತಿಂಗಳಿಗೆ ಅಷ್ಟು ಬೇಡ, 8 ಯುಎಸ್ ಹಣ ಪಾವತಿಸಿ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಿ ಎಂದು ಹೇಳಿದ್ದರು.
ಜನರು ಸ್ವತಃ ಶುಲ್ಕ ತೆರಲು ಆರಂಭಿಸಿದರೆ ಜಾಹೀರಾತುದಾರರ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. ಕಂಪನಿಯ ಕಾರ್ಯನಿರ್ವಹಣೆಗೆ ಇದರಿಂದ ಹೆಚ್ಚಿನ ಸ್ವಾತಂತ್ರ್ಯ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.
ಟ್ವಿಟರ್ನಲ್ಲಿ ಬ್ಲೂಟಿಕ್ ಪಡೆಯುವುದು ಪ್ರತಿಷ್ಠೆಯ ವಿಷಯವೂ ಆಗಿದೆ. ‘ಪ್ರಸ್ತುತ ಟ್ವಿಟರ್ನಲ್ಲಿ ಅಧಿಪತಿಗಳು ಮತ್ತು ಕೆಲಸಗಾರರು ಎಂಬ ಎರಡು ವರ್ಗ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಈ ಅಸಮಾನತೆ ಇರುವುದಿಲ್ಲ. ತಿಂಗಳಿಗೆ 8 ಡಾಲರ್ ಶುಲ್ಕ ತೆರುವ ಯಾರು ಬೇಕಾದರೂ ಬ್ಲೂಟಿಕ್ಗೆ ಅಪ್ಲೈ ಮಾಡಬಹುದಾಗಿದೆ. ಈ ಮೊತ್ತವನ್ನು ಆಯಾ ದೇಶಗಳ ಆರ್ಥಿಕ ಸ್ಥಿತಿಗತಿಗೆ ತಕ್ಕಂತೆ ಪರಿಷ್ಕರಿಸಲಾಗುವುದು.
ಇದನ್ನೂ ಓದಿ: ಟ್ವಿಟ್ಟರ್ ಸಂಸ್ಥೆ ಎಲೋನ್ ಮಸ್ಕ್ ಹತೋಟಿಗೆ; ಸಿಇಒ ಪರಾಗ್ ಅಗ್ರವಾಲ್ ಸೇರಿದಂತೆ ಉನ್ನತ ಅಧಿಕಾರಿಗಳು ವಜಾ
ಬ್ಲೂ-ಟಿಕ್ ಪಡೆದಿರುವ ಖಾತೆಗಳಿಗೆ ಟ್ವಿಟರ್ ಆಲ್ಗರಿದಂನಲ್ಲಿ ಆದ್ಯತೆ ಸಿಗುತ್ತದೆ. ‘ಬ್ಲೂಟಿಕ್ ಪಡೆದ ಖಾತೆಗಳಿಗೆ ಪ್ರತಿಕ್ರಿಯೆಗಳು, ಉಲ್ಲೇಖಗಳು ಮತ್ತು ಹುಡುಕಾಟಗಳಲ್ಲಿ ಆದ್ಯತೆ ಸಿಗುತ್ತದೆ. ಇಂಥವರಿಗೆ ದೀರ್ಘ ಅವಧಿಯ ವಿಡಿಯೊ / ಆಡಿಯೊ ಪೋಸ್ಟ್ ಮಾಡಲೂ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದರು.
ಬ್ಲೂ ಟಿಕ್'ಗೆ ಶುಲ್ಕ ಪಾವತಿ ಮಾಡಬೇಕೆಂಬ ಮಸ್ಕ್ ಹೇಳಿಕೆಗೆ ಹಲವರಿಂದ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇಂದೂ ಪ್ರತಿಕ್ರಿಯೆ ನೀಡಿರುವ ಎಲಾನ್ ಮಸ್ಕ್, ಎಲ್ಲಾ ದೂರುದಾರರಿಗೆ, ದಯವಿಟ್ಟು ನೀವು ದೂರು ನೀಡುವುದನ್ನು ಮುಂದುವರಿಸಿ, ಆದರೆ, ಬ್ಲೂ ಟಿಕ್ ಪಡೆಯಲು 8 ಡಾಲರ್ ವೆಚ್ಚವಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


