ವಿದೇಶ

ಗಾಜಾಪಟ್ಟಿ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ: 7 ಮಕ್ಕಳು ಸೇರಿ 21 ಮಂದಿ ಸಜೀವ ದಹನ

ಗಾಜಾ ಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿರುವ ವಸತಿ ಕಟ್ಟಡದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಜೀವ ದಹನಗೊಂಡಿದ್ದಾರೆ.

ಗಾಜಾಪಟ್ಟಿ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ: 7 ಮಕ್ಕಳು ಸೇರಿ 21 ಮಂದಿ ಸಜೀವ ದಹನ
ಸಾಂದರ್ಭಿಕ ಚಿತ್ರ
Published On :

ಜೆರುಸಲೆಮ್: ಗಾಜಾ ಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿರುವ ವಸತಿ ಕಟ್ಟಡದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಜೀವ ದಹನಗೊಂಡಿದ್ದಾರೆ.

ಉತ್ತರ ಗಾಜಾದಲ್ಲಿ ಜನನಿಬಿಡ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಗಾಜಾದ ಆಂತರಿಕ ಸಚಿವಾಲಯ ತಿಳಿಸಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿಯಲ್ಲಿ ಕಾಣಿಸಿಕೊಂಡ ಬೃಹತ್ ಜ್ವಾಲೆಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿಗೆ ಒಂದು ಗಂಟೆಗೂ ಹೆಚ್ಚು ಸಮಯ ಬೇಕಾಯಿತು ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಟ್ಟಡದೊಳಗೆ ಹೆಚ್ಚಿನ ಪ್ರಮಾಣದ ಗ್ಯಾಸೋಲಿನ್ ಸಂಗ್ರಹಿಸಲಾಗಿದೆ, ಇದು ಬೆಂಕಿಯ ಉಲ್ಬಣಕ್ಕೆ ಕಾರಣವಾಗಿದೆ. ಕಟ್ಟಡದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.