ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ; ಒಂದೇ ದಿನದಲ್ಲಿ ಕೋವಿಡ್ ಕೇಸ್ ದಾಖಲೆಯ ಏರಿಕೆ, ಲಾಕ್ ಡೌನ್ ವಿಸ್ತರಣೆ
ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ ಉಂಟಾಗಿದ್ದು, ಒಂದೇ ದಿನದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಾಖಲೆಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

ಬೀಜಿಂಗ್: ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ ಉಂಟಾಗಿದ್ದು, ಒಂದೇ ದಿನದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಾಖಲೆಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಚೀನಾದಾದ್ಯಂತ ಪ್ಯಾಂಡಮಿಕ್ ಲಾಕ್ ಡೌನ್ ಗಳು ವಿಸ್ತರಣೆಯಾಗುತ್ತಿದ್ದು, ಚೀನಾದ ಅತಿ ದೊಡ್ಡ ಐಫೋನ್ ತಯಾರಕ ಕಾರ್ಖಾನೆಯಲ್ಲಿ ನೌಕರರು ಲಾಕ್ ಡೌನ್ ನಿಯಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.
6.6 ಮಿಲಿಯನ್ ಜನರಿರುವ ಝೆಂಗ್ಝೌ ಎಂಬ ಪ್ರದೇಶದ 8 ಜಿಲ್ಲೆಗಳಲ್ಲಿನ ನಿವಾಸಿಗಳಿಗೆ 5 ದಿನಗಳ ಕಾಲ ಮನೆಯಲ್ಲಿಯೇ ಇರಲು ಸರ್ಕಾರ ಸೂಚಿಸಿದೆ. ಸ್ಥಳೀಯ ಆಡಳಿತ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ ನಡೆಸಲು ಸೂಚನೆ ನೀಡಿದೆ.
ಮಂಗಳವಾರ ಹಾಗೂ ಬುಧವಾರದಂದು ಝೆಂಗ್ಝೌ ನಲ್ಲಿರುವ ಅತಿ ದೊಡ್ಡ ಐಫೋನ್ ತಯಾರಿಕೆ ಕಾರ್ಖಾನೆಯಲ್ಲಿ ಲಾಕ್ ಡೌನ್ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ವೀಡಿಯೋ ವೈರಲ್ ಆಗತೊಡಗಿದೆ.
ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಪ್ರಕರಣಗಳು 31,444 ಕ್ಕೆ ಏರಿಕೆಯಾಗಿದ್ದು, 2019 ರಲ್ಲಿ ಚೀನಾದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಬಳಿಕ ಮೊದಲ ಬಾರಿಗೆ ಕೋವಿಡ್-19 ಪ್ರಕರಣಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


